ಪ್ರಸ್ತುತ ದಿನಗಳಲ್ಲಿ ಐಟಿ ತರಬೇತಿ ಅವಶ್ಯ: ವಿಷ್ಣುವರ್ಧನ
ಸಿಂಧನೂರು: ಇಂದಿನ ಯುಗದಲ್ಲಿ ಗಣಕಯಂತ್ರದ ಶಿಕ್ಷಣ ಮತ್ತು ಐಟಿ ಕೋರ್ಸ್ಗಳ ತರಬೇತಿ ಹೆಚ್ಚು ಅವಶ್ಯ ಎಂದು ನಗರದ ಜ್ಞಾನಜ್ಯೋತಿ ಕಾಲೇಜಿನ ಪ್ರಾಚಾರ್ಯ ವಿಷ್ಣುವರ್ಧನ ರೆಡ್ಡಿ ಸಲಹೆ ಹೇಳಿದರು.
ನಗರದ ಐಡಿಯಲ್ ಬಿಸಿಎ ಪದವಿ ಕಾಲೇಜಿನಲ್ಲಿ ಗುರುವಾರ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಯಾವುದೇ ಕೋರ್ಸ್ಗಳಲ್ಲಿ ತಮ್ಮ ಮುಂದಿನ ಗುರಿಯನ್ನು ಇಟ್ಟುಕೊಂಡು ವಿದ್ಯಾಭ್ಯಾಸ ಮಾಡಿದರೆ ಮಾತ್ರ ಉತ್ತಮ ಶಿಕ್ಷಣವಂತರಾಗಲು ಸಾಧ್ಯ ಎಂದರು.
ದುಶ್ಚಟಗಳಿಂದ ದೂರವಿರಿ: ಪ್ರಸ್ತುತ ವಿದ್ಯಮಾನದಲ್ಲಿ ಕಂಪ್ಯೂಟರ್ಗಳ ಪ್ರಾಮುಖ್ಯತೆ ಹೆಚ್ಚುತ್ತಿರುವುದರಿಂದ ವಿದ್ಯಾರ್ಥಿಗಳು ಅದರ ಬಗ್ಗೆ ಹೆಚ್ಚಿನ ಜ್ಞಾನ ಪಡೆದುಕೊಳ್ಳಬೇಕು. ಇದರ ಜೊತೆಜೊತೆಗೆ ಮಾರ್ಗದರ್ಶಕರು ಸಹ ತಮ್ಮ ವಿದ್ಯಾರ್ಥಿಗಳಿಗೆ ಹೆಚ್ಚಿನ ತಿಳಿವಳಿಕೆ ಹಾಗೂ ಪ್ರೋತ್ಸಾಹ ನೀಡಬೇಕು. ಇಂದಿನ ಯುವಕರು ಅನೇಕ ದುಶ್ಚಟಗಳಿಗೆ ಮಾರು ಹೋಗಿ ಜೀವನ ಹಾಳುಮಾಡಿಕೊಳ್ಳುತ್ತಿದ್ದಾರೆ. ದುಶ್ಚಟಗಳಿಂದ ದೂರವಾಗಿ ಪ್ರತಿಯೊಬ್ಬ ಯುವಕರು ದೇಶಕ್ಕೆ ಮಾದರಿಯಾಗುವ ಜೊತೆಗೆ ಭಯೋತ್ಪಾದನೆ ತಡೆಗಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಬೇಕೆಂದು ಎಂದರು.
ಕೌಶಲ್ಯಾಧಾರಿತ ಶಿಕ್ಷಣ ಪಡೆಯಿರಿ: ಪ್ರಾಚಾರ್ಯ ಸತೀಶ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಬಾರಿ 371(ಜೆ) ಕಲಂ ಜಾರಿಯಾಗಿದ್ದು, ಯಾವುದೇ ಕೋರ್ಸ್ನ ವಿದ್ಯಾರ್ಥಿಗಳಿಗೆ ಉದ್ಯೋಗದ ಕೊರತೆ ಉಂಟಾಗುವುದಿಲ್ಲ. ಇದರ ಸದುಪಯೋಗ ಪಡೆದುಕೊಳ್ಳಬೇಕು. ವಿದ್ಯಾರ್ಥಿಗಳು ಕೌಶಲ್ಯ ಆಧಾರಿತ ಶಿಕ್ಷಣ ಪಡೆದುಕೊಳ್ಳಬೇಕು. ಇದಕ್ಕೆ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೈಜೋಡಿಸಿದಾಗ ಇದರ ಮಹತ್ವ ನಮಗೆಲ್ಲಾ ಲಭ್ಯವಾಗುತ್ತದೆ ಎಂದು ಹೇಳಿದರು.
ಇದೇ ವೇಳೆ ಪತ್ರಕರ್ತ ಶೇಖರ ಯರದಿಹಾಳ, ಕಿಯೋನಿಕ್ಸ್ ಕಂಪ್ಯೂಟರ್ ಮುಖ್ಯಸ್ಥೆ ಅನುಸೂಯ, ಉಪನ್ಯಾಸಕರಾದ ರಾಜಶೇಖರ ಬಂಗಾರ ಶೆಟ್ಟರ್, ಶರಣಪ್ಪ, ಸರಸ್ವತಿ ಪಾಲ್ಗೊಂಡಿದ್ದರು. ಸರಸ್ವತಿ ಸ್ವಾಗತಿಸಿದರು. ಜಗದೀಶ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾಧರ ವಂದಿಸಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

