ರಾಯಚೂರು

ಸಿಂಧನೂರು: ಭುವನೇಶ್ವರಿ ಭಾವಚಿತ್ರ ಮೆರವಣಿಗೆ

Published On :

ಸಿಂಧನೂರು: ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವದಲ್ಲಿ ಭುವನೇಶ್ವರಿ ದೇವಿ ಭಾವಚಿತ್ರವನ್ನು ಅದ್ಧೂರಿಯಾಗಿ ಮೆರವಣಿಗೆ ಮಾಡಲಾಯಿತು.
ನಗರಸಭೆ ಮೈದಾನದಿಂದ ಆರಂಭಗೊಂಡ ಮೆರವಣಿಗೆ ಚನ್ನಮ್ಮ ವೃತ್ತ, ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಮಹಾವೀರ ವೃತ್ತದಿಂದ ತಾಪಂ ಆವರಣದವರೆಗೆ ಜರುಗಿತು. ಕಿತ್ತೂರು ರಾಣಿ ಚೆನ್ನಮ್ಮ ಪೋಷಾಕು ತೊಟ್ಟ ಪುಟಾಣಿ ಮಕ್ಕಳು ನೋಡುಗರ ಗಮನ ಸೆಳೆದರು.
ಸಮಿತಿ ಅಧ್ಯಕ್ಷ ಎಂ.ಯೇಸುರಾಜ, ಗೌರವಾಧ್ಯಕ್ಷ ಬಾಳಪ್ಪ, ನಗರ ಘಟಕದ ಅಧ್ಯಕ್ಷ ಜಾವೇದ, ಉತ್ತರ ಕರ್ನಾಟಕದ ಕಾರ್ಯಾಧ್ಯಕ್ಷ ಕೆ.ಗೋವಿಂದರಾಜ, ವೀರೇಶ ಯಡಿಯೂರಮಠ, ವೀರಯ್ಯಬೇರಿಗಿ ಕೋಟೆ, ಎ.ಜಿ. ಪಾಟೀಲ್, ಜಾವೇದಅಲಿ, ಗೌರವಾಧ್ಯಕ್ಷ ಗಾದಿಲಿಂಗಪ್ಪ, ಜಿಲ್ಲಾ ಉಪಾಧ್ಯಕ್ಷ ರಡ್ಡೆಪ್ಪ, ಮಹಾಂತಗೌಡ ಇದ್ದರು.
--
'ಸ್ವಸ್ಥ ಸಮಾಜ ನಿರ್ಮಾಣಕ್ಕೆ ಕಾನೂನು ಅರಿವು ಅವಶ್ಯ'
ಸಿಂಧನೂರು: ಕಾನೂನು ತಿಳಿವಳಿಕೆಯಿಂದ ಸಮಾಜದಲ್ಲಿ ಸ್ವಾಸ್ಥ್ಯ ಕಾಪಾಡಲು ಸಹಕಾರಿಯಾಗುತ್ತದೆ ಎಂದು ಹಿರಿಯ ಶ್ರೇಣಿ ನ್ಯಾಯಾಧೀಶ ಆರ್.ವೈ. ಶಶಿಧರ ಹೇಳಿದರು.
ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಕಾನೂನು ಸಾಕ್ಷರತಾ ರಥ ಮತ್ತು ಸಂಚಾರಿ ನ್ಯಾಯಾಲಯ ಆಗಮಿಸಿದ ಹಿನ್ನೆಲೆಯಲ್ಲಿ ಸ್ಥಳೀಯ ಶಂಕರ ಟ್ರಸ್ಟ್ ಕಾಲೇಜಿನಲ್ಲಿ ಏರ್ಪಡಿಸಿದ್ದ ಕಾನೂನು ಅರಿವು- ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕಾನೂನು ಪರಿಪಾಲನೆ ಮಾಡುವ ಮೂಲಕ ಪ್ರತಿಯೊಬ್ಬರೂ ಶಾಂತಿ ಕಾಪಾಡಬೇಕು ಎಂದು ಸಲಹೆ ನೀಡಿದರು. ಕಿರಿಯ ಶ್ರೇಣಿ ಪ್ರಧಾನ ನ್ಯಾಯಾಧೀಶೆ ಬಿ.ಎಸ್. ರಾಯಣ್ಣವರ್, ವಕೀಲರ ಸಂಘದ ಅಧ್ಯಕ್ಷ ಕೆ.ಭೀಮನಗೌಡ, ಎನ್.ರಾಮನಗೌಡ, ಶಹರ ಠಾಣೆ ಪಿಎಸ್‌ಐ ಬಾಳನಗೌಡ, ಸರ್ಕಾರಿ ಅಭಿಯೋಜಕ ಶೇಖರಪ್ಪ ಶಾಲಿಗನೂರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ವಕೀಲರ ಸಂಘದ ಮಾಜಿ ಅಧ್ಯಕ್ಷ ಅಜಯಕುಮಾರ ಗದ್ರಟಗಿ ಇದ್ದರು. ತಿರುಪತಿ ಕಾರ್ಯಕ್ರಮ ನಿರ್ವಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.