ರಾಯಚೂರು

ನಂದವಾಡಗಿ ಏತನೀರಾವರಿ ಯೋಜನೆ ಜಾರಿ ವಿಳಂಬ; ಶಾಸಕ ಮಾನಪ್ಪ ಆಕ್ರೋಶ

Published On :

ಮುದಗಲ್:  ತಾಲೂಕಿನ ಪ್ರಮುಖ ನಂದವಾಡಗಿ ಏತ ನೀರಾವರಿ ಯೋಜನೆಯನ್ನು ಆರಂಭಿಸಲು ಕಾಂಗ್ರೆಸ್ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಶಾಸಕ ಮಾನಪ್ಪ ವಜ್ಜಲ್ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ಪಪಂ ವತಿಯಿಂದ ಏರ್ಪಡಿಸಿದ್ದ ಪೌರ ಸನ್ಮಾನ ಸ್ವೀಕರಿಸಿ ಮಾತನಾಡಿ, ಹಿಂದಿನ ಸರ್ಕಾರದ ಅವಧಿಯಲ್ಲೇ ಯೋಜನೆಗೆ ಬಜೆಟ್‌ನಲ್ಲಿ ಅನುದಾನ ನಿಗದಿಯಾಗಿದೆ, ಕ್ರಿಯಾಯೋಜನೆ ಸಿದ್ಧಗೊಂಡಿದೆ. ನೀರು ಹಂಚಿಕೆಯೂ ಆಗಿದೆ. ಆದರೂ ಕಾಂಗ್ರೆಸ್ ಸರ್ಕಾರ ಕಾಮಗಾರಿ ಟೆಂಡರ್ ಕರೆಯದೆ ವಿಳಂದ ಮಾಡುತ್ತಿದೆ. ಅಲ್ಲದೆ 3.75 ಟಿಎಂಸಿ ನೀರು ಹಂಚಿಕೆಯಾಗಿದ್ದು, ಹೆಚ್ಚಿನ 6 ಟಿಎಂಸಿ ನೀರು ಹಂಚಿಕೆ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸುವ ನೆಪದಲ್ಲಿ ಯೋಜನೆ ಜಾರಿಗೆ ರಾಜಕೀಯ ಮಾಡಲಾಗುತ್ತಿದೆ ಎಂದರು.
ಎಚ್ಚರಿಕೆ: ಮುದಗಲ್ ವಿಭಾಗದ ಸಾವಿರಾರು ಎಕರೆ ಜಮೀನಿಗೆ ನೀರಾವರಿ ಸೌಲಭ್ಯ ನೀಡುವ ಈ ಯೋಜನೆ ಆರಂಭವಾಗದಿದ್ದರೆ ತಾಲೂಕಿನ ರೈತರು, ಸಂಘ ಸಂಸ್ಥೆಗಳು ಸೇರಿ ಎಲ್ಲರೊಟ್ಟಿಗೆ ಉಪವಾಸ ಸತ್ಯಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಪಪಂ ಅಧ್ಯಕ್ಷ ರಜ್ಜಬಲಿ ಟಿಂಗ್ರಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯಾಧಿಕಾರಿ ಎಂ.ವಿಜಯಲಕ್ಷ್ಮಿ, ಎಂಜಿನಿಯರ್ ಮಲ್ಲಣ್ಣ, ಸದಸ್ಯ ಮಹ್ಮದ್ ಸಾದಿಕ್ ಅಲಿ, ಉಪಾಧ್ಯಕ್ಷೆ ಹಂಪಮ್ಮ ನಾಗನಗೌಡ, ಸ್ಥಾಯಿ ಸಮಿತಿ ಅಧ್ಯಕ್ಷ ಹೆಮಂತ ನಾಗಲಾಪೂರ ಹಾಗು ಸರ್ವ ಸದಸ್ಯರು ಉಪಸ್ಥಿತರಿದ್ದರು.  ಕಾರ್ಯಕ್ರಮದಲ್ಲಿ ಶಿಕ್ಷಕ ತಿಮ್ಮಣ್ಣ ಕಾರ್ಯಕ್ರಮ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.