ಬಿಸಿಎಂ ಹಾಸ್ಟೆಲ್ಗೆ ಸೌಕರ್ಯ ಕಲ್ಪಿಸಿ
ಕನ್ನಡಪ್ರಭವಾರ್ತೆ , ರಾಯಚೂರು , ಡಿ.2
ನಗರದ ಲಿಂಗಸ್ಗೂರು ರಸ್ತೆಯಲ್ಲಿರುವ ಬಿಸಿಎಂ ವೃತ್ತಿಪರ ಬಾಲಕರ ವಸತಿ ನಿಲಯಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ನಿಲಯದ ವಿದ್ಯಾರ್ಥಿಗಳು ಸೋಮವಾರ ಅನಿರ್ಧಿಷ್ಟ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.
ವಸತಿ ನಿಲಯದಲ್ಲಿ ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ಆದರೆ ನಿಲಯದಲ್ಲಿ ಯಾವುದೇ ಮೂಲ ಸೌಕರ್ಯವಿಲ್ಲದೆ ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೇಡಿಕೆಗಳು: ವಸತಿ ನಿಲಯಕ್ಕೆ ಸ್ವಂತ ಕಟ್ಟಡ ವ್ಯವಸ್ಥೆ ಕಲ್ಪಿಸಬೇಕು. ಕುಡಿಯುವ ನೀರು ಶುದ್ಧೀಕರಣ ವ್ಯವಸ್ಥೆ, ಗ್ರಂಥಾಲಯ ವ್ಯವಸ್ಥೆ, ಪಠ್ಯಪುಸ್ತಕ, ಕಂಪ್ಯೂಟರ್, ಸೋಲಾರ್ ವ್ಯವಸ್ಥೆ, ಸ್ಟಡೀ ಲ್ಯಾಂಪ್ ಮತ್ತು ಸ್ಟಡಿ ಚೇರ್ ವ್ಯವಸ್ಥೆ ಮಾಡಬೇಕು. ಶೈಕ್ಷಣಿಕ ಪ್ರವಾಸ ಕೈಗೊಳ್ಳಬೇಕು. ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಬೇಕು. ಶೌಚಾಲಯ ಬಾಗಿಲು ಹಾಗೂ ಕೋಣೆಗಳ ಕಿಟಕಿ ದುರಸ್ತಿಗೊಳಿಸಬೇಕು. ನಿಲಯದ ಸುತ್ತಮುತ್ತ ಕಲುಷಿತ ವಾತಾವರಣವಿದ್ದು, ಸ್ವಚ್ಛಗೊಳಿಸಬೇಕು. ತ್ವರಿತಗತಿಯಲ್ಲಿ ವಸತಿ ನಿಲಯದ ಬದಲಾವಣೆ ಮಾಡಬೇಕು. ಅಧಿಕಾರಿಗಳು ಭೇಟಿ ನೀಡಿ ಸಮಸ್ಯೆ ಪರಿಹರಿಸಬೇಕು. ಆರೋಗ್ಯ ಸಮಸ್ಯೆಗೆ ಸೂಕ್ತ ಪರಿಹಾರ ಒದಗಿಸಬೇಕು. ಖಾಯಂ ಸಹಾಯಕ ಸಿಬ್ಬಂದಿ ನೇಮಕಾತಿ ಮಾಡಬೇಕು. ನಿಲಯದಲ್ಲಿ ಜನರೇಟರ್ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯ ಕಲ್ಪಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಧರಣಿಯಲ್ಲಿ ನಿಲಯದ ವಿದ್ಯಾರ್ಥಿಗಳಾದ ಶಂಕರ್, ನಾಗರಾಜ, ದೇವೇಗೌಡ, ಮಹೇಶ, ವಿಜಯ ಕುಮಾರ, ರಂಗಣ್ಣ, ಹನುಮೇಶ, ಬಸನಗೌಡ, ಪ್ರಕಾಶ, ಸಿದ್ಧಲಿಂಗ, ಗುರುಬಸವ, ಶಿವಕುಮಾರ, ಹನುಮಂತ, ಬಸವರಾಜ, ವಸಂತ, ತಿಪ್ಪೇಶ, ಉಮೇಶ, ಮಹೇಂದ್ರ, ನರೇಶ ಸೇರಿದಂತೆ ಇನ್ನಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

