ರಾಯಚೂರು

ಬೇಡಿಕೆ ಈಡೇರಿಕೆಗೆ ಆಗ್ರಹ: ದಸಂಸ ಧರಣಿ

Published On :

ದೇವದುರ್ಗ: ತಾಲೂಕಿನ 28 ಗ್ರಾಪಂಗಳಿಗೆ ಸಂಬಂಧಿಸಿ ದಲಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಂಗಳವಾರ ದಲಿತ ಸಂಘರ್ಷ ಸಮಿತಿ(ಭೀಮವಾದ) ಕಾರ್ಯಕರ್ತರು ತಾಪಂ ಎದುರು ಅನಿರ್ದಿಷ್ಟ ಧರಣಿ ನಡೆಸಿ ಒತ್ತಾಯಿಸಿದರು.
ಕರ್ನಾಟಕ ದಲಿತ ಸಂಘರ್ಷ (ಭೀಮವಾದ) ಸಮಿತಿ ಮುಖಂಡ ಮೇಲಪ್ಪ ಭಾವಿಮನಿ ನೇತೃತ್ವದಲ್ಲಿ ಧರಣಿ ನಡೆಸಿದ ಕಾರ್ಯಕರ್ತರು, ತಾಲೂಕಿನ 28 ಗ್ರಾಪಂ ಗಳಲ್ಲಿ ದಲಿತರಿಗೆ ಸರ್ಕಾರದ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿಲ್ಲ ಎಂದು ಆರೋಪಿಸಿದರು.
ತಾಲೂಕಿನ ಚಿಂಚೋಡಿ ಗ್ರಾಪಂ ವ್ಯಾಪ್ತಿಯ ವೀರಗೋಟ ಗ್ರಾಮದ ಪುನಾವಸತಿ ನವಗ್ರಾಮದ ಸರ್ಕಾರಿ ಜಾಗಯಲ್ಲಿ ಅನಧಿಕೃತವಾಗಿ ಅಂಬಿಗರ ಚೌಡಯ್ಯನವರ ಭಾವಚಿತ್ರ ಅಳವಡಿಸಿದ್ದು, ಕೂಡಲೇ ತೆರವುಗೊಳಿಸಬೇಕು. ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಂಡ ಫಲಾನುಭವಿಗಳಿಗೆ ಹಣ ನೀಡಬೇಕು ಎಂದು ಒತ್ತಾಯಿಸಿದರು.
ತಾಲೂಕಿನಲ್ಲಿ ಕಾಲು, ಬಾಯಿ ರೋಗದಿಂದ ಮೃತಪಟ್ಟ ಕುರಿ, ಮೇಕೆ ಮತ್ತು ಜಾನುವಾರುಗಳ ಮಾಲೀಕರಿಗೆ ಪರಿಹಾರ ನೀಡಬೇಕೆಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.
ಧರಣಿಯಲ್ಲಿ ಸಾಬಣ್ಣ ಕಮ್ಮಲದಿನ್ನಿ, ಎಸ್. ರಾಜಪ್ಪ ಗಬ್ಬೂರು, ಮಾನಪ್ಪ ಚಿಂಚೋಡಿ, ರಾಜಪ್ಪ ಬಾಗೂರು ಸೇರಿ ಅನೇಕ ದಲಿತ ಮುಖಂಡರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.