ರಾಯಚೂರು

ಮಾಜಿ ಸಂಸದರ ಆರೋಪ ಹುರುಳಿಲ್ಲದ್ದು: ಪ್ರತಾಪಗೌಡ

Published On :

ಮಸ್ಕಿ: ಪಟ್ಟಣದಲ್ಲಿ ನಡೆದ ಕನಕದಾಸರ ಜಯಂತಿ ಸಮಾರಂಭದಲ್ಲಿ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪನವರು ತಮ್ಮ ವಿರುದ್ಧ ಮಾಡಿದ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಶಾಸಕ ಪ್ರತಾಪಗೌಡ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕುರುಬ ಜನಾಂಗದ ಮತಗಳು ತಮಗೆ ಬಂದಿಲ್ಲ ಎಂದು ತಾವು ಹೇಳುತ್ತಿರುವುದಾಗಿ ಮಾಜಿ ಸಂಸದ ವಿರೂಪಾಕ್ಷಪ್ಪ ಆರೋಪಿಸಿದ್ದು, ಅವರ ಆರೋಪದಲ್ಲಿ ಹುರುಳಿಲ್ಲ. ಕೆ.ವಿರೂಪಾಕ್ಷಪ್ಪನವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷದಲ್ಲಿದ್ದು, ಯಾರ ಪರ ಪ್ರಚಾರ ಮಾಡಿದರು ಎಂಬುದನ್ನು ಬಹಿರಂಗಪಡಿಸಬೇಕೆಂದು ಒತ್ತಾಯಿಸಿದ್ದಾರೆ.
ಕುರುಬ ಸಮಾಜಕ್ಕೆ ಸೇರಿದ ಹಿಂದುಳಿದ ವರ್ಗದ ನಾಯಕ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗುತ್ತಾರೆ ಎಂಬ ವಿಷಯ ಗೊತ್ತಿದ್ದರೂ ಕೆ.ವಿರೂಪಾಕ್ಷಪ್ಪನವರು ಮಸ್ಕಿ ಕ್ಷೇತ್ರದಲ್ಲಿ ಬಿಎಸ್ಸಾರ್ ಕಾಂಗ್ರೆಸ್ ಪರವಾಗಿ ಪ್ರಚಾರ ನಡೆಸಿದರು. ಅದರಿಂದಾಗಿ ಕುರುಬ ಜನಾಂಗದವರು ಬಿಎಸ್ಸಾರ್ ಕಾಂಗ್ರೆಸ್ ಪರವೇ ಒಲವು ತೋರಿದ್ದು ಎಲ್ಲರಿಗೆ ತಿಳಿದಿದೆ ಎಂದು ಹೇಳಿದ್ದಾರೆ. ಇನ್ನು ಮುಂದೆ ಈ ರೀತಿಯ ಗೊಂದಲ ಸೃಷ್ಟಿಸುವಂಥ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.