ಕಷ್ಟಪಟ್ಟು ಓದುವುದಕ್ಕಿಂತ ಇಷ್ಟಪಟ್ಟು ಓದಿ
ಸಿಂಧನೂರು: ನಮ್ಮಲ್ಲಿರುವ ಜ್ಞಾನವನ್ನು ಸರಿಯಾದ ಸಮಯಕ್ಕೆ ಉಪಯೋಗಿಸಿಕೊಳ್ಳಬೇಕು. ಪ್ರಯತ್ನ, ಪ್ರತಿಫಲ ಹಾಗೂ ಯಶಸ್ಸು ನಮ್ಮಲ್ಲಿದೆ. ವಿದ್ಯಾರ್ಥಿಗಳು ಕಷ್ಟಪಟ್ಟು ಓದುವುದಕ್ಕಿಂತ ಇಷ್ಟಪಟ್ಟು ಓದಬೇಕು ಎಂದು ತಾಲೂಕಿನ ಜವಳಗೇರಾ ಸರ್ಕಾರಿ ಪಪೂ ಕಾಲೇಜಿನ ಪ್ರಾಚಾರ್ಯ ಹಾಗೂ ಎನ್ನೆಸ್ಸೆಸ್ ಗುಲ್ಬರ್ಗ ವಿಭಾಗದ ಎನ್ನೆಸ್ಸೆಸ್ ಸಂಯೋಜನಾಧಿಕಾರಿ ಎಸ್.ಶಿವರಾಜ್ ಹೇಳಿದರು.
ನಗರದ ಜ್ಞಾನಜ್ಯೋತಿ ಪಪೂ ವಿಜ್ಞಾನ ಕಾಲೇಜಿನಲ್ಲಿ ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತಾಶ್ರಯದಲ್ಲಿ ಎಂ.ಎಸ್. ಗೌಡ ಸ್ಮಾರಕದತ್ತಿ ಉಪನ್ಯಾಸದಲ್ಲಿ ಶಿಕ್ಷಣ ಹಾಗೂ ಸಾಮಾಜಿಕ ಮೌಲ್ಯಗಳು ಎಂಬ ವಿಷಯ ಕುರಿತು ಅವರು ಮಾತನಾಡಿದರು.
ಇಷ್ಟಪಟ್ಟು ಓದುವುದರಿಂದ ಅದು ಕಠಿಣ, ಭಾರವೆನಿಸುವುದಿಲ್ಲ. ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಇನ್ನೊಬ್ಬರಿಗೆ ನೋವಾಗದಂತೆ ನಡೆದುಕೊಳ್ಳಿ. ಪರೀಕ್ಷೆಯಲ್ಲಿ ನಾಲ್ಕು ಮಾರ್ಕ್ಸ್ ಕಡಿಮೆ ಬಂದರೂ ಚಿಂತೆಯಿಲ್ಲ, ಜೀವನದಲ್ಲಿ ಕೆಟ್ಟ ಹೆಸರು ಪಡೆಯದಂತೆ ಜಾಗ್ರತೆ ವಹಿಸಬೇಕೆಂದು ಸಲಹೆ ನೀಡಿದರು.
ಕಸಾಪ ತಾಲೂಕಾಧ್ಯಕ್ಷೆ ರಮಾದೇವಿ ಶಂಭೋಜಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳಲ್ಲಿ ದತ್ತಿಗಳ ಮಹತ್ವವನ್ನು ತಿಳಿಸಿ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಗಳಿಗೆ ಉತ್ತಮ ಸಹಕಾರ ದೊರೆಯುತ್ತಿದೆ ಎಂದು ಹೇಳಿದರು.
ಕಸಾಪ ಜಿಲ್ಲಾ ಗೌರವಾಧ್ಯಕ್ಷ ಎಸ್.ಶರಣೇಗೌಡ, ಜ್ಞಾನಜ್ಯೋತಿ ಪಿಯು ವಿಜ್ಞಾನ ಕಾಲೇಜಿನ ಪ್ರಾಚಾರ್ಯ ಎನ್.ಪಿ.ವಿಷ್ಣುವರ್ದನರೆಡ್ಡಿ ಮಾತನಾಡಿದರು. ಇದೇ ವೇಳೆ ಕನ್ನಡ ಸಾಹಿತ್ಯ ಪರಿಷತ್ತಿಗೆ ನೂತನದತ್ತಿ ನೀಡಿದ ದತ್ತಿದಾನಿ ವೈ. ರಾಧಾ ನರೇಂದ್ರನಾಥ ಅವರನ್ನು ಪರಿಷತ್ತಿನಿಂದ ಗೌರವಿಸಲಾಯಿತು.
ಉಪನ್ಯಾಸಕ ಡಾ. ಬಸವರಾಜ್ ನಾಯಕ, ಸಾಹಿತಿ ಬೀರಪ್ಪ ಶಂಭೋಜಿ ಉಪಸ್ಥಿತರಿದ್ದರು. ಪೂಜಾ ಮೇಟಿ ಪ್ರಾರ್ಥಿಸಿದರು. ಕಸಾಪ ಸದಸ್ಯೆ ಶಿವಲೀಲಾ ಹಿರೇಮಠ ಸ್ವಾಗತಿಸಿದರು. ತಾಲೂಕು ಕಸಾಪ ಗೌರವ ಕಾರ್ಯದರ್ಶಿ ಶ್ರೀಶೈಲ್ ಕೌದಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

