ರಾಯಚೂರು

ಮಹಿಳಾ ದೌರ್ಜನ್ಯ ತಡೆಯಿರಿ

Published On :

ರಾಯಚೂರು: ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯಿಂದ ಈಚೆಗೆ ನಗರದಲ್ಲಿ ಆಯೋಜಿಸಿದ್ದ ವಿದ್ಯಾರ್ಥಿ-ಯುವಜನ- ಮಹಿಳೆಯರ ಜಿಲ್ಲಾ ಸಮಾವೇಶದಲ್ಲಿ ಕೈಗೊಂಡ ನಿರ್ಣಯಗಳನ್ನು ಜಿಲ್ಲಾಡಳಿತಕ್ಕೆ ಬುಧವಾರ ಸಲ್ಲಿಸಲಾಯಿತು.
ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕೂಡಲೇ ಕಾರ್ಯಪ್ರವೃತ್ತ ವಾಗಬೇಕು. ನ್ಯಾಯಮೂರ್ತಿ ವರ್ಮಾ ಆಯೋಗದ ಶಿಫಾರಸು ಜಾರಿಗೊಳಿಸಬೇಕು. ಅತ್ಯಾಚಾರ ಪ್ರಕರಣಗಳನ್ನು ಇತ್ಯರ್ಥ ಮಾಡಲು ಅವಶ್ಯವಿರುವಷ್ಟು ತ್ವರಿತ ವಿಲೇವಾರಿ ನ್ಯಾಯಾಲಯಗಳನ್ನು ಸ್ಥಾಪಿಸಬೇಕೆಂದು ಆಗ್ರಹಿಸಿದರು.
ನಿಷೇಧ ಕಾಯ್ದೆ ಜಾರಿಗೊಳಿಸಿ: ಅಶ್ಲೀಲ ವೆಬ್‌ಸೈಟ್, ಸಿನಿಮಾ, ಜಾಹೀರಾತು ಹಾಗೂ ಇನ್ನಿತರೆ ಕಾರ್ಯಕ್ರಮಗಳನ್ನು ನಿಷೇಧಿಸಬೇಕು. ಮಹಿಳೆಯರ ಅಸಭ್ಯ ಚಿತ್ರಣ ನಿಷೇಧ ಕಾಯ್ದೆ ಜಾರಿಗೊಳಿಸಬೇಕು. ಸಾರ್ವಜನಿಕ ಸಾರಿಗೆಯಲ್ಲಿ ಜಿಪಿಎಸ್ ಅಳವಡಿಸಿ ಭದ್ರತೆ ಕಲ್ಪಿಸಬೇಕೆಂದು ಮನವಿ ಮಾಡಿದರು.
ಮದ್ಯ ಹಾಗೂ ಮಾದಕ ವಸ್ತುಗಳ ಹಾವಳಿ ತಡೆಗಟ್ಟಬೇಕು. ಮದ್ಯದ ಸೇವನೆಗೆ ಪ್ರಚೋದಿಸುವ ಜಾಹೀರಾತು ನಿಷೇಧಿಸಬೇಕು. ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು. ಜಿಲ್ಲಾ ಮಟ್ಟದಲ್ಲಿ ಶಾಲಾ-ಕಾಲೇಜುಗಳ ಕಾಂಪೌಂಡ್ ಗೋಡೆಗಳಿಗೆ ಅಶ್ಲೀಲ ಭಿತ್ತಿ ಪತ್ರ ಅಂಟಿಸುವುದನ್ನು ನಿರ್ಬಂಧಿಸುವಂತೆ ಒತ್ತಾಯಿಸಿದರು.
ಶೌಚಾಲಯ ನಿರ್ಮಿಸಿ: ಸೈಬರ್ ಕೆಫೆಗಳ ಮೇಲೆ ನಿಗಾಯಿಡಬೇಕು. ಅಶ್ಲೀಲ ಚಿತ್ರ-ವಿಡಿಯೋ ಪ್ರದರ್ಶನ ಕಂಡುಬಂದರೆ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಸ್ಥಳಗಳಲ್ಲಿ ರಾತ್ರಿ ವೇಳೆ ಬೀದಿ ದೀಪ ಉರಿಯುವಂತೆ ಕ್ರಮ ಕೈಗೊಳ್ಳಬೇಕು. ಶಾಲಾ- ಕಾಲೇಜು, ಕಚೇರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರಿಗೆ ಅಗತ್ಯವಿರುವಷ್ಟು ಶೌಚಾಲಯ ನಿರ್ಮಿಸಬೇಕೆಂದು ಆಗ್ರಹಿಸಿದರು.
ಚಿತ್ರ ಮಂದಿರಗಳಲ್ಲಿ ಅಶ್ಲೀಲ ಚಿತ್ರ ಪ್ರದರ್ಶನ ಸ್ಥಗಿತಗೊಳಿಸಬೇಕು. ಶಾಲಾ, ಕಾಲೇಜು, ಕಚೇರಿಗಳಲ್ಲಿ ಸ್ತ್ರೀಸುರಕ್ಷಾ ಸಮಿತಿಗಳನ್ನು ರಚಿಸಿ, ಶಾಲಾ ಕಾಲೇಜುಗಳಲ್ಲಿ ಕರಾಟೆ- ಜುಡೋ ಮುಂತಾದ ಸ್ವರ್ಯ ರಕ್ಷಣಾ ತರಬೇತಿ ನಡೆಯುವಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರಾದ ಚೇತನಾ ಬನಾರೆ, ಶರಣಪ್ಪ ಉದ್ಬಾಳ್, ಮಹೇಶ ಚೀಕಲಪರ್ವಿ ಸೇರಿದಂತೆ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.