ರಾಯಚೂರು

ಆರೋಗ್ಯ ಸಹಾಯಕರಿಗೆ ಬೀಳ್ಕೊಡುಗೆ

Published On :

ಮುದಗಲ್: ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಸಹಾಯಕ ರಾಜಾಸಾಬ ಆನೆಹೊಸೂರು ಇವರಿಗೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು, ಸಿಬ್ಬಂದಿ ಬೀಳ್ಕೊಡುವ ಸಮಾರಂಭವನ್ನು ಏರ್ಪಡಿಸಿದ್ದರು.
ವೈದ್ಯಾಧಿಕಾರಿ ಡಾ. ರಾಜೇಂದ್ರಕುಮಾರ ಮನಗೂಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರಿ ನೌಕರರಿಗೆ ವರ್ಗಾವಣೆ, ನಿವೃತ್ತಿ ಕಡ್ಡಾಯವಾದುದು. ಆದರೆ ಇರುವ ಸೇವಾವಧಿಯಲ್ಲಿ ಸಮಾಜಕ್ಕೆ ನಾವು ಏನು ಮಾಡಿದ್ದೇವೆ ಎನ್ನುವುದು ಮುಖ್ಯ. ರಾಜಾಸಾಬ ಒಳ್ಳೆ ಆರೋಗ್ಯ ಸಹಾಯಕರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಉಳಿದ ಆರೋಗ್ಯ ಸಹಾಯಕರಿಗೆ ಮಾರ್ಗದರ್ಶಕರಾಗಿದ್ದರು ಎಂದರು.
ಡಾ. ಈಶ್ವರ ಸವಡಿ ಮಾತನಾಡಿ, ಜೀವನದಲ್ಲಿ ಏನನ್ನೂ ಕಟ್ಟಿಕೊಂಡು ಹೋಗಲು ಸಾಧ್ಯವಿಲ್ಲ. ಸೇವಾ ಸಮಯದಲ್ಲಿ ನಾವು ಮಾಡಿದ ಸೇವೆ ಶಾಶ್ವತವಾದುದು. ಜನಸಾಮಾನ್ಯರಿಗೂ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವಲ್ಲಿ ರಾಜಾಸಾಬ್ ಉತ್ತಮ ಸೇವೆ ಸಲ್ಲಿಸಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಆಯುಷ್ ವೈದ್ಯಾಧಿಕಾರಿ ಡಾ. ಸಂಗನಗೌಡ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಎ. ರವೂಫ್, ನೇತ್ರಾಧಿಕಾರಿ ಸುಶಿಲೇಂದ್ರ, ಸಿಬ್ಬಂದಿ ಇಮಾಂಬಿ, ಶುಶ್ರೂಷಕಿ ಹಾಗೂ ಶಿವಕುಮಾರ, ಮುಂತಾದವರು ಉಪಸ್ಥಿತರಿದ್ದರು. ಕಾರ್ಯಕ್ರಮ ನಿರೂಪಣೆ, ಸ್ವಾಗತ ಶಂಕ್ರಯ್ಯ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.