ಕಳಪೆ ಕಾಮಗಾರಿಗೆ ಹಾಲಿ ಶಾಸಕರು ಹೊಣೆಯಲ್ಲ
ದೇವದುರ್ಗ: ದೇವದುರ್ಗ ವಿಧಾನಸಭೆ ಕ್ಷೇತ್ರದಲ್ಲಿ ಸರ್ಕಾರದ ಯೋಜನೆಗಳ ಜಾರಿಯಲ್ಲಿ ಅಕ್ರಮ ನಡೆದಿದೆ ಎಂಬ ಜನಸಂಗ್ರಾಮ ಪರಿಷತ್ನ ರಾಜ್ಯ ಸಮಿತಿ ಸಂಚಾಲಕ ರಾಘವೇಂದ್ರ ಕುಷ್ಟಗಿ ಅವರ ಆರೋಪವನ್ನು ಅರಕೇರಾ ಬ್ಲಾಕ್ ಕಾಂಗ್ರೆಸ್ ಮುಖಂಡ ಭೀಮನಗೌಡ ನಾಗಡದಿನ್ನಿ ಮತ್ತು ಬಸಯ್ಯ ಶಾಖೆ ತಳ್ಳಿ ಹಾಕಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ದೇವದುರ್ಗ ತಾಲೂಕಿನ ಮಸರಕಲ್ದಿಂದ ಶಿವಂಗಿ ರಸ್ತೆ, ನಮ್ಮ ಗ್ರಾಮ ನಮ್ಮ ರಸ್ತೆ ಅಡಿಯಲ್ಲಿ ಶಿವಂಗಿ, ಜರದಬಂಡಿ, ಪಿಲಿಗುಂಡ ರಸ್ತೆಗಳ ಕಾಮಗಾರಿಯನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಈ ಕಾಮಗಾರಿ ಸಂಪೂರ್ಣ ಕಳಪೆ ಮತ್ತು ಕ್ರಿಯಾಯೋಜನೆಗೆ ವಿರುದ್ಧವಾಗಿ ನಡೆಯುತ್ತಿದ್ದು ಅವುಗಳನ್ನು ತಡೆ ಹಿಡಿದು, ಬಿಲ್ ಪಾವತಿಸದಂತೆ ಕಾಂಗ್ರೆಸ್ನಿಂದ ಈ ಹಿಂದೆ ಒತ್ತಾಯಿಸಿದ್ದು, ಮಾಜಿ ಶಾಸಕರ ಒತ್ತಡಕ್ಕೆ ಮಣಿದ ಅಧಿಕಾರಿಗಳು ಕಳಪೆ ಕಾಮಗಾರಿಯಾಗಿದ್ದರೂ ಗುತ್ತಿಗೆದಾರರಿಗೆ ಬಿಲ್ ಪಾವತಿಸಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಕಳಪೆ ಕಾಮಗಾರಿಗಳ ಬಿಲ್ ಪಾವತಿಗೆ ಹಾಲಿ ಶಾಸಕ ವೆಂಕಟೇಶ ನಾಯಕ ಅಥವಾ ಅವರ ಕುಟುಂಬದವರು ಅಧಿಕಾರಿಗಳ ಮೇಲೆ ಒತ್ತಡ ಹೇರಿಲ್ಲ. ಶಾಸಕರು ಕ್ಷೇತ್ರದಲ್ಲಿ ಅಕ್ರಮಗಳಿಗೆ ಅವಕಾಶ ನೀಡುತ್ತಿಲ್ಲ. ಕಳಪೆ ಕಾಮಗಾರಿ ಕೈಗೊಳ್ಳದಂತೆ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

