ವಿಕಲಚೇತನರ ಸ್ಪರ್ಧೆ: ವಿಜೇತರಿಗೆ ಬಹುಮಾನ
ಸಿಂಧನೂರು: ವಿಶ್ವ ವಿಕಲಚೇತನ ಮಕ್ಕಳ ದಿನಾಚರಣೆ ನಿಮಿತ್ತ ತಾಲೂಕು ಬಿಆರ್ಸಿ ಕೇಂದ್ರದಲ್ಲಿ ವಿಕಲಚೇತನ ಮಕ್ಕಳಿಗಾಗಿ ವಿವಿಧ ಆಟೋಟ ಹಾಗೂ ಸಾಂಸ್ಕೃತಿಕ ಸ್ಫರ್ಧೆಗಳನ್ನು ಏರ್ಪಡಿಸಲಾಗಿತ್ತು. ತಾಲೂಕಿನ ವಿವಿಧ ಶಾಲೆಗಳಿಂದ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಮಕ್ಕಳಿಗಾಗಿ ಕ್ರೀಡಾ ವಿಭಾಗದಿಂದ ಕಪ್ಪೆ ಓಟ, ಸಂಗೀತ ಕುರ್ಚಿ, ಲಿಂಬೆಹಣ್ಣಿನ ಓಟ, ಹಾಗೂ ಮಡಿಕೆ ಹೊಡೆಯುವ ಸ್ಪರ್ಧೆಗಳನ್ನು ಸಂಘಟಿಸಲಾಗಿತ್ತು. ಸಾಂಸ್ಕೃತಿಕ ವಿಭಾಗದಿಂದ ಜಾನಪದ ಗೀತೆ, ಮಿಮಿಕ್ರಿ, ಆಶುಭಾಷಣ ಹಾಗೂ ಚಿತ್ರಕಲೆಯನ್ನು ಹಮ್ಮಿಕೊಳ್ಳಲಾಯಿತು. ವಿಕಲಚೇತನ ಮಕ್ಕಳ ಪೋಷಕರಿಗೂ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು. ವಿಜೇತ ಮಕ್ಕಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.
ಈ ಕಾರ್ಯಕ್ರಮವನ್ನು ಕ್ಷೇತ್ರ ಸಮನ್ವಯ ಅಧಿಕಾರಿ ವಿರುಪಾಕ್ಷಪ್ಪ ಹುನುಗುಂದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಆದೆಪ್ಪ ಹೆಂಬಾ, ಮಲ್ಲಪ್ಪ ಬಾದರ್ಲಿ, ರವೀಂದ್ರಗೌಡ, ಟಿಬಿಪಿ ಶಾಲೆಯ ಮುಖ್ಯಗುರು ಚಂದ್ರಮೌಳಿಸ್ವಾಮಿ ಭಾಗವಹಿಸಿದ್ದರು. ಐಇಆರ್ಟಿ ಸಂಯೋಜಕ ವೀರನಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಸೋಮನಾಥ ಸ್ವಾಗತಿಸಿದರು. ಕೊಟ್ರೇಶ ನಿರೂಪಿಸಿದರು. ಅಯ್ಯನಗೌಡ, ಭೀಮನಗೌಡ, ಸೋಮನಾಥ, ಹುಲಿಗೆಮ್ಮ ಹಾಗೂ ವಿವಿಧ ಶಾಲೆಗಳ ಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

