ಪೊಲೀಸ್ ದೌರ್ಜನ್ಯ: ಪ್ರತಿಭಟನೆ
ಸಿಂಧನೂರು: ನ್ಯಾಯೋಚಿತವಾಗಿ ದೊರಕಬೇಕಾದ ಸೌಲಭ್ಯ ಕೇಳಲು ಮುಂದಾದ ಕರ್ನಾಟಕ ರೈತ ಸಂಘದ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ಮಾಡಿಸುವ ಮೂಲಕ ಜಿಲ್ಲಾಧಿಕಾರಿ ಅಮಾನವೀಯವಾಗಿ ವರ್ತಿಸಿದ್ದು, ಕೂಡಲೇ ಸರ್ಕಾರ ಅವರನ್ನು ಅಮಾನತುಗೊಳಿಸುವಂತೆ ಆರ್ವೈಎಫ್ಐ ಹಾಗೂ ಕೆಆರ್ಎಸ್ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು.
ಭೂರಹಿತರಿಗೆ ಸರ್ಕಾರಿ ಭೂಮಿ ಹಂಚಿಕೆ, ಸಾಗುವಳಿದಾರರಿಗೆ ಪಟ್ಟಾ ವಿತರಣೆ, ಗುಡಿಸಲು ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ, ಅಕ್ರಮ ಗಣಿಗಾರಿಕೆ ತಡೆಗಟ್ಟುವ ಹಕ್ಕೊತ್ತಾಯಗಳನ್ನು ಜಿಲ್ಲಾಡಳಿತ ಸಂಪೂರ್ಣ ನಿರ್ಲಕ್ಷ್ಯ ಮಾಡಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
ಕೂಲಿ ಕಾರ್ಮಿಕರ ಹೋರಾಟಗಳನ್ನು ಹತ್ತಿಕ್ಕಲು ಜಿಲ್ಲಾಧಿಕಾರಿ ನಾಗರಾಜ್ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ಲಾಠಿಚಾರ್ಜ್ ಘಟನೆಯಲ್ಲಿ ಕಾರ್ಯಕರ್ತರನ್ನು ಪೊಲೀಸರು ಮನಬಂದಂತೆ ಥಳಿಸಿರುವುದನ್ನು ನೋಡಿದರೆ ಜನರ ಬಗ್ಗೆ ಇವರಿಗಿರುವ ಕಾಳಜಿ ಗೊತ್ತಾಗುತ್ತದೆ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.
ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹ: ಲಾಠಿ ಚಾರ್ಜ್ಗೆ ಆದೇಶ ನೀಡಿದ ಜಿಲ್ಲಾಧಿಕಾರಿ ವಿರುದ್ಧ ಹಾಗೂ ಕೂಲಿ ಕಾರ್ಮಿಕರಿಗೆ ರಕ್ತ ಗಾಯವಾಗುವಂತೆ ಹೊಡೆದ ಪೊಲೀಸರ ಮೇಲೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಗಾಯಗೊಂಡು ಆಸ್ಪತ್ರೆ ಸೇರಿದವರ ವೈದ್ಯಕೀಯ ವೆಚ್ಚ ಭರಿಸಿ ಪರಿಹಾರ ನೀಡಬೇಕು. ಈ ಘಟನೆಯಲ್ಲಿ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದ್ದು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕೆಂದು ಆಗ್ರಹಿಸಿದರು.
ಆರ್ವೈಎಫ್ಐ ಜಿಲ್ಲಾ ಕಾರ್ಯದರ್ಶಿ ನಾಗರಾಜ್ ಪೂಜಾರ್, ಕೆಡಿಎಸ್ ಪ್ರಧಾನ ಕಾರ್ಯದರ್ಶಿ ಬಸವರಾಜ ಬೆಳಗುರ್ಕಿ, ರಶೀದಾ, ಮರಿಯಮ್ಮ, ಸಿದ್ದಮ್ಮ, ಬಸವರಾಜ ಹೊಸಳ್ಳಿ ಇನ್ನಿತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

