ರಾಯಚೂರು

ಡಾ.ಅಂಬೇಡ್ಕರ್ ಆಶಯ ಪಾಲನೆ ಅವಶ್ಯ

Published On :

ಕನ್ನಡಪ್ರಭ ವಾರ್ತೆ, ಲಿಂಗಸ್ಗೂರು, ಡಿ.6
ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರರ ಸಂವಿಧಾನದ ಆಶಯ ಹಾಗೂ ಅವರ ವಿಚಾರಗಳನ್ನು ನಾವುಗಳು ಪಾಲನೆ ಮಾಡುವುದು ಅಗತ್ಯ ಎಂದು ಸಹಾಯಕ ಆಯುಕ್ತ ಟಿ.ಯೋಗೇಶ್ ಅಭಿಪ್ರಾಯಪಟ್ಟರು.
ಪಟ್ಟಣದ ಭಾರತೀಯ ವೈದ್ಯಕೀಯ ಸಂಭಾಂಗಣದಲ್ಲಿ ತಾಲೂಕು ಆಡಳಿತದಿಂದ ಶುಕ್ರವಾರ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರರ 57ನೇ ಮಹಾಪರಿನಿರ್ವಾಣ ದಿನಾಚರಣೆ ನಿಮಿತ್ತ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.
ದಲಿತರ ಅಭಿವೃದ್ಧಿಗೆ ಪರಿಶ್ರಮ: ಡಾ. ಬಿ.ಆರ್. ಅಂಬೇಡ್ಕರ್ ಅವರು ಪ್ರಾಥಮಿಕ ಹಂತದಿಂದ ಬದುಕಿನುದ್ದಕ್ಕೂ ಎದುರಾದ ಎಲ್ಲ ಸಂಕಷ್ಟಗಳನ್ನು ಧೈರ್ಯದಿಂದ ಎದುರಿಸಿ ಉನ್ನತ ಸ್ಥಾನ ಪಡೆದರು. ದಲಿತ ಸಮುದಾಯದ ಅಭಿವೃದ್ಧಿಗೆ ಅವರ ಪರಿಶ್ರಮ ಹಾಗೂ ನೀಡಿದ ಕೊಡುಗೆ ಅಪಾರವಾಗಿದೆ.
ಬುದ್ಧ, ಬಸವ, ಅನೇಕ ದಾರ್ಶನಿಕರಂತೆ ಡಾ. ಅಂಬೇಡ್ಕರ್ ಅವರು ಅಸಮಾನತೆ ಹೋಗಲಾಡಿಸುವಲ್ಲಿ ಶ್ರಮಿಸಿದ್ದಾರೆ. ಜ್ಞಾನ, ವ್ಯಕ್ತಿತ್ವ, ಪ್ರತಿಭೆಗಳಿಂದ ಒಬ್ಬ ವ್ಯಕ್ತಿಯನ್ನು ಗುರುತಿಸಬೇಕೇ ವಿನಃ ಜಾತಿಯಿಂದಲ್ಲ. ಪ್ರಜ್ಞಾಪೂರ್ವ ವಿಚಾರವಂತ ಮನಸ್ಸುಗಳು ಜಾಗೃತರಾಗಿ ಎಲ್ಲರನ್ನೂ ಸಮಾನವಾಗಿ ಕಾಣಬೇಕಿದೆ. ಡಾ. ಅಂಬೇಡ್ಕರರ ಉನ್ನತ ವಿಚಾರ, ವ್ಯಕ್ತಿತ್ವ, ಪರಿಶ್ರಮ, ಆದರ್ಶಗಳನ್ನು ನಾವೆಲ್ಲ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಡಾ. ಅಂಬೇಡ್ಕರ್ ಅವರ ಜೀವನ ಕುರಿತು ಉಪನ್ಯಾಸಕ ಶರಣಬಸಪ್ಪ ಅಂಕೇರಿ ವಿಶೇಷ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಕುಮಾರಸ್ವಾಮಿ ಸಾಲ್ಮನಿ, ತಾಪಂ ಅಧ್ಯಕ್ಷೆ ಬಸಮ್ಮ ಯಾದವ್, ಜಿಪಂ ಸದಸ್ಯರಾದ ಭೂಪನಗೌಡ ಕರಡಕಲ್, ಹೆಚ್.ಬಿ. ಮುರಾರಿ, ಜಿಪಂ ಮಾಜಿ ಅಧ್ಯಕ್ಷ ಗುಂಡಪ್ಪ ನಾಯಕ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಎಲ್.ಬಿ.ಸಜ್ಜನ್, ಸಿಡಿಪಿಒ ಪ್ರಭಾಕರ ಸೇರಿದಂತೆ ಉಪಸ್ಥಿತರಿದ್ದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.