ರಾಯಚೂರು

ಪಡಿತರ ವಿತರಣೆಯಲ್ಲಿ ಅವ್ಯವಹಾರ: ಪ್ರತಿಭಟನೆ

Published On :

ಕನ್ನಡಪ್ರಭ ವಾರ್ತೆ, ಲಿಂಗಸ್ಗೂರು, ಡಿ.6
ಪಡಿತರ ಚೀಟಿ ವಿತರಣೆಯಲ್ಲಿ ಅವ್ಯವಹಾರ ನಡೆದಿದ್ದು, ಕೂಡಲೇ ಈ ಬಗ್ಗೆ ತನಿಖೆ ನಡೆಸಿ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿ ಸಹಾಯಕ ಆಯುಕ್ತರ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಿದರು.
ಪಟ್ಟಣದ ಹನುಮಂತ ದೇವಸ್ಥಾನದಿಂದ ತಹಸೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕರವೇ ಕಾರ್ಯಕರ್ತರು, ಸರ್ಕಾರ ಬಡ, ನಿರ್ಗತಿಕ, ಕೂಲಿ- ಕಾರ್ಮಿಕರಿಗಾಗಿ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆ ಲಾಭ ಪಡೆಯಲು ಪಡಿತರ ಚೀಟಿ ಅವಶ್ಯಕತೆಯಿದೆ. ಆದರೆ ಆಹಾರ ಇಲಾಖೆ ಅಧಿಕಾರಿಗಳು ಪಡಿತರ ಚೀಟಿ ಪಡೆಯಲು ಸಾವಿರಾರು ರೂ. ನೀದಿ ಪಡೆಯುವ ಪರಿಸ್ಥಿತಿ ಬಂದಿರುವುದು ಶೋಚನೀಯ ಸಂಗತಿ.
ತಾಂತ್ರಿಕ ತೊಂದರೆ ನಿಲ್ಲಿಕೆ: ತಾಲೂಕಿನಲ್ಲಿ ಒಟ್ಟು 26,474 ಪಡಿತರ ಚೀಟಿ ಪಡೆಯಲು ಅರ್ಜಿಗಳು ಬಂದಿದ್ದು, ಇದರಲ್ಲಿ ವೈದ್ಯಕೀಯ ಸೇವೆಗೆಂದು ವೈದ್ಯರು ನೀಡಿದ ಪ್ರಮಾಣ ಪತ್ರ ಆಧರಿಸಿ 679 ಪಡಿತರ ಚೀಟಿ ಪಡೆಯಲಾಗಿದೆ. 346 ಚೀಟಿಗಳು ಜನರ ತಾಂತ್ರಿಕ ತೊಂದರೆಯಿಂದ ನಿಲ್ಲಿಸಲಾಗಿದೆ. ಒಟ್ಟು 1025 ಪಡಿತರ ಚೀಟಿಗಳನ್ನು ವಿತರಣೆ ಮಾಡಿರುವುದಾಗಿ ತಿಳಿದು ಬಂದಿರುತ್ತದೆ. ಆದರೆ ಆಹಾರ ಸರಬರಾಜು ನಿರೀಕ್ಷಕರು ಖಾಸಗಿ ವ್ಯಕ್ತಿಗಳನ್ನು ನೇಮಿಸಿಕೊಂಡು ಅವರಿಂದ ಹಣ ಪಡೆದು ಸಾವಿರಾರು ಕಾರ್ಡುಗಳನ್ನು ವಿತರಣೆ ಮಾಡುತ್ತಿದ್ದಾರೆಂದು ಆರೋಪಿಸಿದರು.
ಕೂಡಲೇ ಈ ಬಗ್ಗೆ ತನಿಖೆ ನಡೆಸಿ ಆಹಾರ ಸರಬರಾಜು ನಿರೀಕ್ಷಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಸಂಘಟನೆಯಿಂದ ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆಂದು ಮನವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.
ಕರವೇ ಜಿಲ್ಲಾಧ್ಯಕ್ಷ ಶ್ರೀಕಾಂತ ಪಾಟೀಲ್ ಗೂಳಿ, ತಾಲೂಕಾಧ್ಯಕ್ಷ ರಾಜಶೇಖರ ತಂಬಾಕೆ, ಉಪಾಧ್ಯಕ್ಷ ಮಹ್ಮದ್ ಅನ್ವರ್, ಕಾರ್ಯಕರ್ತರಾದ ಪರಶುರಾಮ, ವೀರೇಶ ಭೋವಿ, ರಸೂಲ್, ಸಂಜಯ ರಕ್ಕಸಗಿ, ಜಗದೀಶ, ನವೀನ, ಸಾಗರ, ಪ್ರಭು ಹಡಪದ, ಪವನ, ಮಹಾಬಲೇಶಗೌಡ, ಸಿದ್ಧು, ಶೇಖರಪ್ಪ, ನಾಗರಾಜ ಇತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.