ಜಿಲ್ಲೆಯಲ್ಲಿ ಶಿಕ್ಷಣ ಸಾರ್ವತ್ರೀಕರಣವಾಗಬೇಕು: ಡಿಡಿಪಿಐ
ಮುದಗಲ್: ರಾಯಚೂರು ಜಿಲ್ಲೆಯು ಶಿಕ್ಷಣ ಕ್ಷೇತ್ರದಲ್ಲಿ ಹೆಸರುವಾಸಿಯಾಗಲು ಶಿಕ್ಷಕ ವೃಂದದವರ ಜೊತೆ ವಿದ್ಯಾರ್ಥಿಗಳ ಸಹ ಶ್ರಮಿಸಬೇಕು. ಆಗ ಮಾತ್ರ ಜಿಲ್ಲೆಯಲ್ಲಿ ಶಿಕ್ಷಣದ ಸಾರ್ವತ್ರೀಕರಣ ಸಾಧ್ಯ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಮಾಂಜನೇಯ ಅಭಿಪ್ರಾಯಪಟ್ಟರು.
ಪಟ್ಟಣದ ಕ್ರಿಸ್ತಜ್ಯೋತಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಈಗಾಗಲೇ ಲಿಂಗಸ್ಗೂರು ಬಿಇಒ ಹುದ್ದೆಯನ್ನು ನಿಭಾಯಿಸಿ ಪುನಃ ಜಿಲ್ಲೆಗೆ ಹೆಚ್ಚುವರಿ ಹುದ್ದೆಯನ್ನು ಅಲಂಕರಿಸಿದ್ದು ಶಿಕ್ಷಣ ಕ್ಷೇತ್ರದಲ್ಲಿ ಜಿಲ್ಲೆಯನ್ನು ಹೆಸರುಗೊಳಿಸಲು ಇಲಾಖೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.
ಬಿಇಒ ಶಾಂತಗೌಡ ಪಾಟೀಲ್, ಪಪಂ ಶಿಕ್ಷಣ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ ಹೇಮಂತ ನಾಗಲಾಪೂರ ಮಾತನಾಡಿದರು. ಶಾಲೆಯಲ್ಲಿ ಪ್ರಸಕ್ತ ಹಾಗೂ ಕಳೆದ ಸಾಲಿನಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಪಪಂ ಅಧ್ಯಕ್ಷ ರಜ್ಜಬ್ ಅಲಿ, ಉಪಾಧ್ಯಕ್ಷೆ ಹಂಪಮ್ಮ ನಾಗನಗೌಡ, ಎಪಿಎಂಸಿ ನಿರ್ದೇಶಕ ಎಸ್.ಆರ್.ರಸೂಲ್, ಪಪಂ ಸದಸ್ಯರಾದ ಅಬ್ದುಲ್ ರೌಫ್, ಶಿವರಾಜ ತಳವಾರ, ಅಧಿಕಾರಿಗಳಾದ ಮಹಾಮುನಿಯಪ್ಪ, ರವೀಂದ್ರ ಮುದಗಲ್, ಕ್ರೈಸ್ತ ಧರ್ಮದ ಗುರುಗಳು, ಶಾಲೆ ಮುಖ್ಯ ಗುರುಗಳಾದ ಸಿಸ್ಟರ್ ಮರಿಯಾ, ಸಂಚಾಲಕರಾದ ಸಿಸ್ಟರ್ ವಲ್ಸಾ, ಶಿಕ್ಷಕ ವೃಂದದವರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

