ರಾಯಚೂರು

ಜೂಜು: 16 ಮಂದಿ ಬಂಧನ

Published On :

ರಾಯಚೂರು:  ಸಿಂಧನೂರು ತಾಲೂಕಿನ ಕಲ್ಲೂರು ಕ್ಯಾಂಪಿನಲ್ಲಿ ಜೂಜಾಡುತ್ತಿದ್ದ ಹಾಜಿಸಾಬ್ ಸೇರಿದಂತೆ 16 ಮಂದಿಯನ್ನು ಬಂಧಿಸಲಾಗಿದೆ. ಗ್ರಾಮದಲ್ಲಿ ಜೂಜಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ, ಪಣಕ್ಕಿಟ್ಟಿದ್ದ 51040 ಜಪ್ತಿ ಮಾಡಿದ್ದಾರೆ. ಈ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಆಕಸ್ಮಿಕ ಬೆಂಕಿ: ಮಹಿಳೆ ಸಾವು
ರಾಯಚೂರು:  ಲಿಂಗಸ್ಗೂರು ತಾಲೂಕಿನ ಬೆಂಚಲದೊಡ್ಡಿ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಅಂಬಮ್ಮ ಎಂಬವರು ಮೃತಪಟ್ಟಿದ್ದಾರೆ. ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ.  ಸುಟ್ಟ ಗಾಯಗಳಿಂದ ನರಳುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಬದುಕುಳಿಯಲಿಲ್ಲ. ಈ ಕುರಿತು ಹಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಅಕ್ರಮ ಮರಳು ಪತ್ತೆ
ದೇವದುರ್ಗ: ತಾಲೂಕಿನ ನಿಲುವಂಜಿ ಗ್ರಾಮದ ಹತ್ತಿರ ಕೃಷಿ ಭೂಮಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅಂದಾಜು 80 ಟ್ರಿಪ್ ಮರಳು ಅಧಿಕಾರಿಗಳ ದಾಳಿ ವೇಳೆ ಶನಿವಾರ ಪತ್ತೆಯಾಗಿದೆ. ತಹಸೀಲ್ದಾರ್ ಬಸಲಿಂಗಪ್ಪ ನೈಕೋಡಿ ಅವರು ನಡೆಸಿದ ದಾಳಿಯಲ್ಲಿ ಈ ಅಕ್ರಮ ಮರಳು ಸಂಗ್ರಹ ಪತ್ತೆಯಾಗಿದ್ದು, ಗ್ರಾಮಕ್ಕೆ ಪರಿಶೀಲನೆಗೆ ತೆರಳಿದ ವೇಳೆ ರಸ್ತೆ ಪಕ್ಕದಲ್ಲಿರುವ ಕೃಷಿ ಭೂಮಿಯಲ್ಲಿ ಅಂದಾಜು 80 ಲಾರಿಗಳಷ್ಟು ಪ್ರಮಾಣದ ಅಕ್ರಮ ಮರಳು ಸಂಗ್ರಹ ಪತ್ತೆಯಾಗಿದೆ. ಮರಳನ್ನು ಜಪ್ತಿ ಮಾಡಿ ಲೋಕೋಪಯೋಗಿ ಇಲಾಖೆಗೆ ಒಪ್ಪಿಸಿದ್ದು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳಿಂದ ಮಾಹಿತಿ ಪಡೆದು ಕ್ರಮ ಜರುಗಿಸುವುದಾಗಿ ತಹಸೀಲ್ದಾರರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.