16ರಂದು ಹೆದ್ದಾರಿ ತಡೆ
ಕ.ಪ್ರ. ವಾರ್ತೆ, ದೇವದುರ್ಗ, ಡಿ.9
ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡಿಕೆ, ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ಹಂಚಿಕೆ ಮತ್ತು ಶಾಶ್ವತ ನೀರಾವರಿ ಯೋಜನೆಗಳ ಜಾರಿಗೆ ಆಗ್ರಹಿಸಿ ಡಿ.16ರಂದು ರಾಜ್ಯಾದ್ಯಂತ ಹೆದ್ದಾರಿ ತಡೆ ನಡೆಸಲಾಗುತ್ತದೆಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಯು.ಬಸವರಾಜ ಹೇಳಿದರು.
ಪಟ್ಟಣದಲ್ಲಿ ಸೋಮವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭೂರಹಿತರಿಗೆ ಭೂಮಿ ವಿತರಿಸಬೇಕು. ಶಾಶ್ವತ ನೀರಾವರಿ ಯೋಜನೆಗಳ ಜಾರಿಗೆ ಸರ್ಕಾರ ಮುಂದಾಗಬೇಕು. ರೈತರು ಬೆಳೆದ ಬೆಳೆಗಳಿಗೆ ಸಮರ್ಪಕ ಬೆಂಬಲ ಬೆಲೆ ನೀಡಬೇಕೆಂದು ಹೋರಾಟದ ಮೂಲಕ ಒತ್ತಾಯಿಸಲಾಗುತ್ತದೆ ಎಂದು ಎಚ್ಚರಿಸಿದರು.
ಚಳವಳಿ ತೀವ್ರಗೊಳಿಸುವ ಎಚ್ಚರಿಕೆ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಹಾಗೂ ಬಡವರ ಬೇಡಿಕೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ರೈತರು ಬೆಳೆದ ಬೆಳೆಗಳಿಗೆ ಬೆಂಬಲ ನೀಡಲು ಮತ್ತು ರೈತರ ಸಮಸ್ಯೆಗಳ ನಿವಾರಣೆಗೆ ಗಮನಹರಿಸದ ಸಿಎಂ ಸಿದ್ದರಾಮಯ್ಯ ಅವರ ವರ್ತನೆಯ ವಿರುದ್ಧ ಚಳವಳಿ ತೀವ್ರಗೊಳಿಸುವುದಾಗಿ ಎಚ್ಚರಿಸಿದರು.
ಅರ್ಜಿ ತಿರಸ್ಕರಿಸಿದ ಸರ್ಕಾರ: ರಾಜ್ಯದಲ್ಲಿ ಸುಮಾರು 16 ಲಕ್ಷ ಕೃಷಿ ಕಾರ್ಮಿಕರು ಬಗರ್ಹುಕುಂ ಸಾಗುವಳಿ ಮಾಡುತ್ತಿದ್ದು, ಅವರು ಹಕ್ಕು ಪತ್ರಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಅಕ್ರಮ ಸಕ್ರಮ ಯೋಜನೆ ಜಾರಿ ವೇಳೆ ಅವರ ಬಳಿ ಸೂಕ್ತ ದಾಖಲೆಗಳಿರಲಿಲ್ಲ ಎಂದು ಅರ್ಜಿ ತಿರಸ್ಕರಿಸಲಾಗಿದೆ. ಸರ್ಕಾರ ಈ ಬಗ್ಗೆ ಕಾಳಜಿ ವಹಿಸಿ ಅಂಥ ಬಡವರಿಗೆ ಸಾಗುವಳಿಯ ಹಕ್ಕುಪತ್ರ ನೀಡುವಂತೆ ಒತ್ತಾಯಿಸಿದರು.
ಈ ವೇಳೆ ಸಂಘಟನೆಯ ಪ್ರಮುಖರಾದ ಮಲ್ಲಯ್ಯ ಜಾಲಹಳ್ಳಿ, ಜಾಲಹಳ್ಳಿ ಗ್ರಾಪಂ ಸದಸ್ಯರಾದ ತಿಪ್ಪಯ್ಯ ನಾಯಕ, ನರಸಣ್ಣ ನಾಯಕ, ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ ಶಬ್ಬೀರ್ ಅಹ್ಮದ್ ಜಾಲಹಳ್ಳಿ, ಗಿರಿಯಪ್ಪ ಪೂಜಾರಿ ಸೇರಿ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

