ಕೊಲೆ ಅಪರಾಧಿಗೆ 5 ವರ್ಷ ಶಿಕ್ಷೆ
ರಾಯಚೂರು: ಮಾನವಿ ತಾಲೂಕಿನ ಸಿರವಾರ ಬಳಿಯ ಜಕ್ಕಲದಿನ್ನಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ನ್ಯಾಯಾಲಯವು ಆರೋಪಿಗೆ ಐದು ವರ್ಷ ಕಠಿಣ ಶಿಕ್ಷೆ, 10 ಸಾವಿರ ದಂಡ ಹಾಗೂ ಮೃತರ ಪತ್ನಿಗೆ 1ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದೆ.
ಸಿರವಾರ ಪೊಲೀಸ್ ಠಾಣೆ ವ್ಯಾಪ್ತಿಯ ಜಕ್ಕಲದಿನ್ನಿ ಗ್ರಾಮದ ಹೊರವಲಯದಲ್ಲಿ ಜಮೀನಿನ ವಿಚಾರಕ್ಕೆ ಸಂಬಂಧಿಸಿ ರಾಘವಯ್ಯ ಎಂಬಾತ ಸಿ.ಎಚ್. ಗೋಪಾಲಕೃಷ್ಣರೊಂದಿಗೆ ಜಗಳ ತೆಗೆದು ಕಬ್ಬಿಣದ ಸರಳಿನಿಂದ ಹೊಡೆದು ತೀವ್ರ ಗಾಯಗೊಳಿಸಿದ್ದು, ನಂತರ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.
ಸಿರವಾರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಲಾಗಿತ್ತು. ಈ ಕುರಿತು ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಲಯದ ಅಪರ ಸತ್ರ ನ್ಯಾಯಾಧೀಶರಾದ ಸತ್ಯನಾರಾಯಣಾಚಾರ್ಯ ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ಸಾರ್ವಜನಿಕ ಆಭಿಯೋಜಕ ಬಿ. ರಂಗಯ್ಯ ವಾದ ಮಂಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

