14ರಂದು ಕಾಲ್ನಡಿಗೆ ಜಾಥಾ
ರಾಯಚೂರು: ತಾಲೂಕಿನ ಗಾರಲದಿನ್ನಿಯಲ್ಲಿ ಪರಿಶಿಷ್ಟ ಪಂಗಡದವರು ಗ್ರಾಮದ ದಲಿತರ ಮೇಲೆ ಸಾಮೂಹಿಕ ಹಲ್ಲೆ ಮಾಡಿದ್ದು, ಘಟನೆ ಖಂಡಿಸಿ ಡಿ. 14ರಂದು ಗಾರಲದಿನ್ನಿ ಗ್ರಾಮದಿಂದ ರಾಯಚೂರಿನವರೆಗೆ ಕಾಲ್ನಡಿಗೆ ಜಾಥಾ ಆಯೋಜಿಸಲಾಗಿದೆ ಎಂದು ಪ್ರದೇಶ ಮಾದಿಗರ ಸಂಘದ ಅಧ್ಯಕ್ಷ ದೇವಮಿತ್ರ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಡಿ. 3ರಂದು ತಾಲೂಕಿನ ಗಾರಲದಿನ್ನಿ ಗ್ರಾಮದಲ್ಲಿ ಆಂಜನೇಯ ದೇವಸ್ಥಾನಕ್ಕೆ ಪ್ರವೇಶಿಸಿದ ಹಿನ್ನೆಲೆಯಲ್ಲಿ ಡಿ.4ರಂದು ಪರಿಶಿಷ್ಟ ಪಂಗಡದವರು ದಲಿತರ ಮನೆಗಳ ಮೇಲೆ ಸಾಮೂಹಿಕ ದಾಳಿ ಮಾಡಿ ಹಲ್ಲೆ ಮಾಡಿದ್ದಾರೆಂದು ಆರೋಪಿಸಿದರು.
ದೂರಿಗೆ ಸ್ಪಂದಿಸುತ್ತಿಲ್ಲ: ಘಟನೆ ಕುರಿತು ಪೊಲೀಸ್ ಇಲಾಖೆಗೆ ದೂರು ನೀಡಿಲ್ಲ. ಕಳೆದ ಅನೇಕ ಸಂದರ್ಭದಲ್ಲಿ ದಲಿತರ ಮೇಲೆ ದೌರ್ಜನ್ಯದ ಪ್ರಕರಣಗಳು ನಡೆದಾಗಲೆಲ್ಲ ಪ್ರಕರಣ ದಾಖಲಿಸಿದ್ದು, ಪರಿಹಾರ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ಹೋರಾಟಕ್ಕೆ ಸಂಘಟನೆಯು ಮುಂದಾಗಿದೆ ಎಂದು ತಿಳಿಸಿದರು. ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗೆ ರಾಜಕೀಯ ಶಕ್ತಿ ಹೊಂದುವುದೊಂದೇ ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಪೀಪುಲ್ಸ್ ಪಾರ್ಟಿ ಸ್ಥಾಪಿಸಿದ್ದು ಪಕ್ಷವನ್ನು ಬೆಂಬಲಿಸಲು ಮನವಿ ಮಾಡಿದರು.
ಪ್ರದೇಶ ಮಾದಿಗರ ಸಂಘದ ಜಿಲ್ಲಾಧ್ಯಕ್ಷ ಸಿ.ಎಂ.ನಾರಾಯಣ, ರಾಜ್ಯ ಕಾರ್ಯದರ್ಶಿ ಆರ್.ಕುಪ್ಪುಸ್ವಾಮಿ, ಡಾ. ಅಂಬೇಡ್ಕರ್ ಪೀಪುಲ್ಸ್ ಪಾರ್ಟಿ ರಾಜ್ಯಾಧ್ಯಕ್ಷ ಮಹೇಂದ್ರಕುಮಾರ್ ಮಿತ್ರ ಗಾರಲದಿನ್ನಿ, ಶಾಂತಪ್ಪ ಭೈರವ ರಾಂಪೂರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

