ತಹಸೀಲ್ದಾರ್ ಕಚೇರಿ; ರಸ್ತೆ ಸಂಚಾರಕ್ಕೆ ಅಡಚಣೆ
ಸಿಂಧನೂರು: ಕಾಂಗ್ರೆಸ್ ಮುಖಂಡ ವೀರೇಶಪ್ಪ ಮಾಡ ಸಿರವಾರ ಅವರ ಮೇಲೆ ಇತ್ತೀಚೆಗೆ ನಡೆದ ಹಲ್ಲೆ ಘಟನೆಯ ಹಿನ್ನೆಲೆಯಲ್ಲಿ ನಗರದ ತಹಸೀಲ್ದಾರ್ ಕಚೇರಿ ಆವರಣದೊಳಗೆ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದೆ.
ಈ ಆವರಣದೊಳಗೆ ವಾಹನಗಳ ನಿಲುಗಡೆಗೆ ನಿಗದಿತ ಜಾಗವಿಲ್ಲದಿರುವುದರಿಂದ ಸಾರ್ವಜನಿಕರು ರಸ್ತೆಗೆ ಅಡ್ಡವಾಗಿ ನಿಲ್ಲಿಸುತ್ತಿದ್ದು, ಇದರಿಂದ ಮುಖ್ಯ ರಸ್ತೆಯಲ್ಲಿ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಅಲ್ಲದೇ ಪ್ರವಾಸಿ ಮಂದಿರದ ಆವರಣದಲ್ಲಿ ಮದ್ಯದ ಬಾಟಲಿಗಳು ಬಿದ್ದಿವೆ. ಅನೈತಿಕ ಮತ್ತು ಅಕ್ರಮ ಚಟುವಟಿಕೆಗಳಿಗೆ ಪ್ರವಾಸಿ ಮಂದಿರವನ್ನು ಕೊಡಲಾಗುತ್ತಿದೆ ಎಂದು ಕೆಲ ಸಂಘಟನೆಗಳ ಮುಖಂಡರು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ಗೆ ದೂರು ಸಲ್ಲಿಸಿರುವ ಹಿನ್ನೆಲೆಯಲ್ಲಿ ಪ್ರವಾಸಿ ಮಂದಿರೊಳಗೆ ವಾಹನ ಪ್ರವೇಶ, ಸಭೆ- ಸಮಾರಂಭ ನಡೆಸದಂತೆ ನಿರ್ಬಂಧ ಹೇರಲಾಗಿದೆ.
ಪ್ರವಾಸಿ ಮಂದಿರದಲ್ಲಿ ಕೋಣೆಗಳು ಬೇಕೆಂದರೆ ಮುಂಚಿತವಾಗಿ ಮಾಹಿತಿ ನೀಡಿ ಹಣ ಪಾವತಿಸಿ ಮೀಸಲಿರಿಸಿದರೆ ಮಾತ್ರ ಕೊಠಡಿಗಳನ್ನು ಕೊಡಲಾಗುತ್ತದೆ. ಇಲ್ಲದಿದ್ದರೆ ಯಾರಿಗೂ ಅವಕಾಶ ಕೊಡುವುದಿಲ್ಲವೆಂದು ಲೋಕೋಪಯೋಗಿ ಇಲಾಖೆ ಸಿಬ್ಬಂದಿ ಹೇಳುತ್ತಿದ್ದಾರೆ.
ಸಾರ್ವಜನಿಕರ ಪ್ರಶ್ನೆ: ತಹಸೀಲ್ದಾರ್ ಕಚೇರಿ ಒಳಗಡೆ ವಾಹನ ಪ್ರವೇಶ ನಿರಾಕರಿಸಿರುವುದರಿಂದ ಕಚೇರಿ ಮುಂಭಾಗದಲ್ಲಿ ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ಮೋಟಾರ್ ಬೈಕ್ಗಳು, ಕಾರ್ಗಳು ಕಚೇರಿ ಗೇಟ್ನ ಮುಂದೆ ನಿಲ್ಲುವುದರಿಂದ ಸಾರ್ವಜನಿಕರಿಗೆ ತೊಂದರೆ ಕೊಟ್ಟಂತಾಗುತ್ತದೆ. ಕಚೇರಿ ಆವರಣದಲ್ಲಿ ಹಲ್ಲೆ ಉಂಟಾಗಿದ್ದಕ್ಕೆ ಹಲ್ಲೆಕೋರರ ಮೇಲೆ ಕ್ರಮ ಕೈಗೊಳ್ಳಲಿ. ಅದು ಬಿಟ್ಟು ವಾಹನಗಳು ಆವರಣದೊಳಕ್ಕೆ ಬರದಂತೆ ನಿರ್ಬಂಧ ಹೇರುವುದು ಅದೆಷ್ಟು ಸರಿ ಎಂದು ಮನುಜಮತ ಬಳಗದ ಪ್ರಧಾನ ಕಾರ್ಯದರ್ಶಿ ಬಸವರಾಜ ಬಾದರ್ಲಿ, ಟಿಯುಸಿಐ ರಾಜ್ಯಾಧ್ಯಕ್ಷ ಡಿ.ಎಚ್.ಪೂಜಾರ, ಕೆ.ಬಸವರಾಜ, ಲಂಕೇಶ ಬಳಗದ ರಾಮಣ್ಣ ಹಿರೇಬೇರಿಗಿ ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

