ರಾಯಚೂರು

ನಾಳೆಯಿಂದ ರಾಷ್ಟ್ರೀಯ ಅಧಿವೇಶನ

Published On :

ಗುಲ್ಬರ್ಗ: ಡಿ. 14 ಮತ್ತು 15 ರಂದು ಎರಡು ದಿನಗಳ ಕಾಲ ನಗರದ ಸಿದ್ಧಾರ್ಥ ಕಾನೂನು ಮಹಾವಿದ್ಯಾಲಯದ ಸಭಾಗೃಹದಲ್ಲಿ ಕನ್ನಡ ಮರಾಠಿ ಸಾಂಸ್ಕೃತಿಕ ಅನುಬಂಧ ಕುರಿತು ರಾಷ್ಟ್ರೀಯ ಅಧಿವೇಶನ ಹಮ್ಮಿಕೊಳ್ಳಲಾಗಿದೆ.ರಾಜ್ಯ ಮರಾಠಿ ಸಾಹಿತ್ಯ ಪರಿಷತ್ತು ಗುಲ್ಬರ್ಗ ಹಾಗೂ ಕಾ. ಸ. ವಾಣಿ ಮರಾಠಿ ಪ್ರಗತಿ ಅಧ್ಯಯನ ಸಂಸ್ಥೆ ಧುಳೆ ಆಶ್ರಯದಲ್ಲಿ 25ನೇ ರಾಷ್ಟ್ರೀಯ ಅಧಿವೇಶನ ನಡೆಯಲಿದ್ದು, ಈ ಅಧಿವೇಶನವು ಕನ್ನಡ ಮರಾಠಿ ಹಾಗೂ ಸಾಂಸ್ಕೃತಿಕ ಸಂಬಂಧಗಳ ಮೇಲೆ ಬೆಳಕು ಚೆಲ್ಲುತ್ತದೆ.ಈ ಅಧಿವೇಶನದಲ್ಲಿ ಮಹಾರಾಷ್ಟ್ರ, ಕರ್ನಾಟಕ ರಾಜ್ಯದ ಖ್ಯಾತ ಸಾಹಿತಿಗಳು, ಸಂಶೋಧಕರು, ವಿಶ್ವವಿದ್ಯಾಲಯಗಳ ಕುಲಪತಿಗಳು ಮುಂತಾದ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ಪ್ರೊ. ಬಾಲಚಂದ್ರ ಶಿಂದೆ ತಿಳಿಸಿದ್ದಾರೆ.
ಬಹುಮಾನ ವಿತರಣೆ ಇಂದು
ಗುಲ್ಬರ್ಗ: ಡಿ.13 ರಂದು ನಗರದ ಜಾಗೃತಿ ಕಾಲೋನಿಯ ಚನ್ನಬಸವೇಶ್ವರ ಪ್ರೌಢಶಾಲೆಯಲ್ಲಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಣಾ ಸಮಾರಂಭ ನಡೆಯಲಿದೆ.ಭೀಮನಗೌಡ ವಿ. ಪಾಟೀಲ್, ವಿಶ್ವನಾಥ ಮಲಕೂಡ, ಸಂಗೀತಾ ಕಟ್ಟಿಮನಿ, ಚನ್ನವೀರಪ್ಪ ಗುಡ್ಡಾ, ಚಂದ್ರಶೇಖರ, ಎಂ.ಬಿ. ಬಾಳಿಗೇರಿ ಪಾಲ್ಗೊಳ್ಳಲಿದ್ದಾರೆ.
ಜೈಶೇನಪ್ರಸಾದಗೆ ಡಾಕ್ಟರೇಟ್
ಗುಲ್ಬರ್ಗ: ಗುಲ್ಬರ್ಗ ವಿಶ್ವವಿದ್ಯಾಲಯವು ಜೈಶೇನಪ್ರಸಾದ ಅವರಿಗೆ ಡಾಕ್ಟರೇಟ್ ಪದವಿ ನೀಡಿದೆ.ಗುಲ್ಬರ್ಗ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಶರಣ ಸಾಹಿತ್ಯ ಸ್ನಾತಕೋತ್ತರ ಮತ್ತು ಸಂಶೋಧನಾ ಅಧ್ಯಯನ ಕೇಂದ್ರ ಬಸವಕಲ್ಯಾಣ ಮತ್ತು ಹುಲಸೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಅತಿಥಿ ಉಪನ್ಯಾಸಕ ಜೈಶೇನಪ್ರಸಾದ ತಂದೆ ರೇವಣಪ್ಪ ಪ್ರಸಾದ ಅವರು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಟಿ. ಪೋತೆ ಅವರ ಮಾರ್ಗದರ್ಶನದಲ್ಲಿ ಹೈ-ಕ ದಲಿತ ಚಳವಳಿ ಮತ್ತು ಸಾಹಿತ್ಯ ಕುರಿತು ಮಂಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ನೀಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.