ಎಂಇಎಸ್ ಶಾಸಕರ ವರ್ತನೆಗೆ ಖಂಡನೆ
ಲಿಂಗಸ್ಗೂರು: ರಾಜ್ಯ ಸರ್ಕಾರದ ಶವಯಾತ್ರೆ ಮಾಡುವುದಾಗಿ ಎಂಇಎಸ್ ಶಾಸಕರು ಹೇಳಿಕೆ ನೀಡಿರುವುದನ್ನು ಖಂಡಿಸಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಹಾಯಕ ಆಯುಕ್ತರ ಕಚೇರಿ ಶಿರಸ್ತೇದಾರ ಭಾನುಮತಿ ಅವರಿಗೆ ಗುರುವಾರ ಮನವಿ ಸಲ್ಲಿಸಲಾಯಿತು.
ಸಾಮಾಜಿಕ ಕಳಕಳಿ: ಬೆಳಗಾವಿಯಲ್ಲಿ ನಡೆದ 4ನೇ ವಿಧಾನಸಭಾ ಅಧಿವೇಶನದ ಸಮಯದಲ್ಲಿ ಎಂಇಎಸ್ ಶಾಸಕರಾದ ಸಂಭಾಜಿ ಪಾಟೀಲ್ ಹಾಗೂ ಅರವಿಂದ ಪಾಟೀಲ್ ಕರ್ನಾಟಕ ಸರ್ಕಾರದ ಶವಯಾತ್ರೆ ಮಾಡುವುದಾಗಿ ಹೇಳಿರುವ ಪ್ರವೃತ್ತಿ ಕನ್ನಡಿಗರ ಸಾಹಿತ್ಯ ಹಾಗೂ ಸಾಮಾಜಿಕ ಕಳಕಳಿಯ ಧ್ವನಿಯಾದ ಕನ್ನಡ ಸಾಹಿತ್ಯ ಪರಿಷತ್ತು ಖಂಡಿಸುತ್ತದೆ.
ಇದನ್ನು ಕೇವಲ ಪ್ರತಿಭಟನೆ ಎಂದು ತಿಳಿಯದೆ ಭಾರತದಂಥ ಪ್ರಜಾಸತ್ತಾತ್ಮಕ ಒಕ್ಕೂಟ ವ್ಯವಸ್ಥೆಯಲ್ಲಿ ಸಂತರು, ಜ್ಞಾನಿಗಳ ಮಾತನ್ನು ಪಾಲಿಸುವ ಭಾರತ ಸಂಸ್ಕೃತಿಯಲ್ಲಿ ಪಂಪ ಕವಿ ನುಡಿದಂತೆ ಮಾನವ ಕುಲ ಒಂದೇ ಎನ್ನುವ ಹಿನ್ನೆಲೆಯಲ್ಲಿ ಪ್ರಜೆಗಳ ಅಭಿವೃದ್ಧಿಯನ್ನು ಬಯಸುವ ಕರ್ನಾಟಕ ಹಾಗೂ ಮಹಾರಾಷ್ಟ್ರದ ಜನರು ಬೇರೆ ಬೇರೆ ಅಲ್ಲ ಎಂದು ತಿಳಿಯುವ ಜನ ನಾಯಕರು ಬೇಕೆನ್ನುವ ಅಪೇಕ್ಷೆ ಇಂದಿನದಾಗಿದೆ.
ಒತ್ತಾಯ: ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಎಲ್ಲ ಜನಪ್ರತಿನಿಧಿಗಳಿಗೆ ವಿಶೇಷವಾಗಿ ಮಹಾರಾಷ್ಟ್ರದವರಿಗೆ ತಿಳುವಳಿಕೆ ನೀಡಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಕಸಾಪ ಜಿಲ್ಲಾಧ್ಯಕ್ಷ ಮಹಾಂತೇಶ ಮಸ್ಕಿ, ತಾಲೂಕು ಅಧ್ಯಕ್ಷ ಸಿ. ಶರಣಪ್ಪ, ಸಾಹಿತಿ ಗಿರಿರಾಜ ಹೊಸಮನಿ, ಕಸಾಪ ಮಾಜಿ ಅಧ್ಯಕ್ಷ ಮಂಜುನಾಥ ಕಾಮಿನ್, ಕಸಾಪ ಪದಾಧಿಕಾರಿಗಳಾದ ಅಯ್ಯಪ್ಪ ಕವಿತಾಳ, ಶ್ರೀನಿವಾಸ ಪೂಜಾರಿ, ಚಂದ್ರಶೇಖರ ರೆಡ್ಡಿ, ಹುಸೇನಪ್ಪ, ರಾಶಿ ಸರ್ಜಾಪುರ, ಗುಂಡೂರಾವ್ ಮಸ್ಕಿ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

