ಒಪೆಕ್ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ
ರಾಯಚೂರು: ಕಳೆದ ಒಂದೂವರೆ ವರ್ಷದಿಂದ ಮುಚ್ಚಿದ್ದ ಇಲ್ಲಿನ ರಾಜೀವಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ(ಒಪೆಕ್ ಆಸ್ಪತ್ರೆ)ಯು ಪುನಾರಂಭಗೊಂಡಿದ್ದು, ಆಸ್ಪತ್ರೆಯ ತಜ್ಞ ವೈದ್ಯರು ಬಾಲಕನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸುವಲ್ಲಿ ಯಶಸ್ವಿಯಾಗಿದ್ದಾರೆ.
ನಗರದ ರಾಜೀವಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 7 ವರ್ಷದ ಬಾಲಕನಿಗೆ ಆಕಸ್ಮಿಕ ಸ್ಫೋಟದಲ್ಲಿ ಗಾಯಗೊಂಡಿದ್ದು, ಆತನಿಗೆ ಆಸ್ಪತ್ರೆಯ ಸೂಪರ್ ಸ್ಪೆಷಾಲಿಟಿ ತೀವ್ರ ನಿಗಾ ಘಟಕದಲ್ಲಿ ದಾಖಲು ಮಾಡಲಾಗಿತ್ತು. ಹೊಟ್ಟೆ ಸೀಳಿ ಕರುಳಿನ ಭಾಗ ಭಾಗಶಃ ತುಂಡಾಗಿ ಹೊರಕ್ಕೆ ಚಾಚಿದ್ದು, ತೀವ್ರ ರಕ್ತಸ್ರಾವದಿಂದಾಗಿ ಬಳಲುತ್ತಿದ್ದ ಬಾಲಕನಿಗೆ ಆಸ್ಪತ್ರೆಯ ವಿಶೇಷಾಧಿಕಾರಿ ಮತ್ತು ಚಿಕ್ಕ ಮಕ್ಕಳ ಶಸ್ತ್ರಚಿಕಿತ್ಸೆ ತಜ್ಞ ಡಾ. ಶಂಕರ ಮಲಪುರೆ, ಶಿಶು ಶಸ್ತ್ರ ಚಿಕಿತ್ಸಾ ತಜ್ಞ ಡಾ. ಟಿ.ಕೆ. ಜಗಜೀವನರಾಂ ಅವರು ತುರ್ತು ಶಸ್ತ್ರಚಿಕಿತ್ಸೆ ನೆರವೇರಿಸಿ ಬಾಲಕನನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ. ಶಸ್ತ್ರ ಚಿಕಿತ್ಸೆಗೆ ಅರವಳಿಕೆ ತಜ್ಞೆ ಡಾ. ಜಯಲಕ್ಷ್ಮಿ, ಎಲುವು ಕೀಲು ತಜ್ಞ ಡಾ. ಕನಕಾಚಲಪತಿ ಸಹಕರಿಸಿದ್ದರು ಎಂದು ರಾಜೀವಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವಿಶೇಷಾಧಿಕಾರಿಗಳ ಕಚೇರಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

