ಮುದಗಲ್; ಸಂಚಾರ ಸಂಕಟ
ಮುದಗಲ್: ಪಟ್ಟಣದ ಆಯಕಟ್ಟಿನ ಸ್ಥಳಗಳಲ್ಲಿ ವಾಹನಗಳ ಮಾಲೀಕರು ಅಡ್ಡಾದಿಡ್ಡಿ ವಾಹನಗಳನ್ನು ನಿಲುಗಡೆ ಮಾಡುತ್ತಿ ದ್ದರಿಂದ ರಸ್ತೆ ಸಂಚಾರಕ್ಕೆ ಸಂಕಷ್ಟ ಎದುರಾಗುತ್ತಿದೆ.
ಪಟ್ಟಣ ಪಂಚಾಯಿತಿ ಹಿಂಭಾಗದಲ್ಲಿರುವ ಆವರಣ, ಗಣೇಶ ಕೆಫೆ ಮುಂಭಾಗದ ರಸ್ತೆ, ತರಕಾರಿ ಮಾರುಕಟ್ಟೆ ರಸ್ತೆ ಸೇರಿದಂತೆ ಜನ ಸಂದಣಿ ಇರುವ ಕಡೆಗಳಲ್ಲಿ ವಾಹನಗಳನ್ನು ರಸ್ತೆ ಅಕ್ಕಪಕ್ಕದಲ್ಲೇ ಅಡ್ಡಾದಿಡ್ಡಿ ನಿಲುಗಡೆ ಮಾಡುತ್ತಿದ್ದರಿಂದ ಇಲ್ಲಿ ಸಂಚಾರ ಸಮಸ್ಯೆಯಾಗಿದೆ. ಇಲ್ಲಿ ಇನ್ನೊಂದು ವಾಹನ ಸಾಗಲು ರಸ್ತೆ ಇರದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಕೇಳುವವರಿಲ್ಲವೇ?: ಗ್ರಾಮೀಣ ಪ್ರದೇಶದಿಂದ ಪ್ರಯಾಣಿಕರನ್ನು ಕರೆ ತರುವ ಆಟೋ, ಟಾಂಟಾಂ, ಟಾಟಾ ಏಸ್, ಜೀಪ್ ಮುಂತಾದ ವಾಹನಗಳನ್ನು ರಸ್ತೆ ಪಕ್ಕದಲ್ಲೇ ನಿಲುಗಡೆ ಮಾಡುವ ಚಾಲಕರು ಲಾಕ್ ಮಾಡಿಕೊಂಡು ಹೋಗುತ್ತಾರೆ. ಬೇರೆ ವಾಹನಗಳು ಬಂದರೆ ತೆರವುಗೊಳಿಸಲು ಸಾಧ್ಯವಾಗದ ರೀತಿಯಲ್ಲಿ ನಿಲುಗಡೆ ಮಾಡುತ್ತಿದ್ದರೂ, ಇಲ್ಲಿ ಯಾರೂ ಹೇಳುವವರಿಲ್ಲ, ಕೇಳುವವರಿಲ್ಲ ಎಂದು ಬೇಸರ ವ್ಯಕ್ತಪಡಿಸುತ್ತಾರೆ.
ಸಂಚಾರ ಸ್ಥಗಿತ: ಇದೇ ರಸ್ತೆಗಳಲ್ಲಿ ಕಿರಾಣಿ, ಗೊಬ್ಬರ ಅಂಗಡಿಗಳು ಸೇರಿದಂತೆ ಸಿಮೆಂಟ್ ಮಾರಾಟ ಮಳಿಗೆಗಳು ಇರುವುದರಿಂದ ದೊಡ್ಡ ದೊಡ್ಡ ಲಾರಿಗಳು ಬಂದರೆ ಗಂಟೆಗಟ್ಟಲೇ ರಸ್ತೆ ಸಂಚಾರ ಸ್ಥಗಿತಗೊಳ್ಳುತ್ತದೆ. ಅಂಗಡಿ ಮಾಲೀಕರಿಗೆ, ವ್ಯಾಪಾರಸ್ಥರಿಗೂ ಇದರಿಂದ ತೊಂದರೆಯಾಗುತ್ತದೆ. ಸಾಮಾನ್ಯರಂತೂ ಸಂಚಾರಕ್ಕೆ ಪರದಾಡುವ ಸ್ಥಿತಿ ನಿರ್ಮಾಣಗೊಳ್ಳುತ್ತದೆ.
ನಿರ್ಲಕ್ಷ್ಯ: ವಾಹನಗಳನ್ನು ಅಡ್ಡಾದಿಡ್ಡಿ ನಿಲುಗಡೆ ಮಾಡುವವರ ವಿರುದ್ಧ ಸ್ಥಳೀಯ ಪೊಲೀಸರು ಯಾವುದೇ ಕಾನೂನು ಕ್ರಮ ಜರುಗಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾರ್ವಜನಿಕರು ತಮ್ಮ ಅಳಲನ್ನು ತೋಡಿಕೊಳ್ಳುತ್ತಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

