ನಗರಸಭೆ ಅಕ್ರಮ: ಹೋರಾಟಕ್ಕೆ ಬೆಂಬಲ
ರಾಯಚೂರು: ಇಲ್ಲಿನ ನಗರಸಭೆಯಲ್ಲಿ ಶೇ.22.75ರ ಅನುದಾನದಲ್ಲಿ ನಡೆದಿರುವ ಅಕ್ರಮ ಹಾಗೂ ತಡೆರಹಿತ ವಿದ್ಯುತ್ ಮಾರ್ಗ ಅಳವಡಿಕೆ ಕಾಮಗಾರಿಯಲ್ಲಿನ ಅವ್ಯವಹಾರದ ವಿರುದ್ಧ ವಿವಿಧ ಸಂಘಟನೆಗಳು ಹಮ್ಮಿಕೊಂಡಿರುವ ಡಿ.18ರ ಹೋರಾಟಕ್ಕೆ ಕರ್ನಾಟಕ ಜನಶಕ್ತಿ ಬೆಂಬಲ ವ್ಯಕ್ತಪಡಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ಸಂಘಟನೆ ಜಿಲ್ಲಾಧ್ಯಕ್ಷ ಹುಸೇನ್ ಬಾಷಾ ಪಲಕನಮರಡಿ, ಸಂಸ್ಥಾಪಕ ಅಧ್ಯಕ್ಷ ಮಂಜುನಾಥ್ ತಿವಾರಿ, ನಗರಸಭೆಯಿಂದ ಎಸ್ಸಿ, ಎಸ್ಟಿಗಳಿಗೆ ಮೀಸಲಿಟ್ಟ ಶೇ.22.75 ರ ಅನುದಾನದ ಬಳಕೆಯಲ್ಲಿ ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಲ್ಲಿ ಜಿಲ್ಲಾಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ. ಅದೇ ರೀತಿ ತಡೆರಹಿತ ವಿದ್ಯುತ್ ಮಾರ್ಗ ಅಳವಡಿಕೆ ಕಾಮಗಾರಿಯಲ್ಲಿಯೂ ಕಾಮಗಾರಿ ಮುಗಿಸದೇ ಪೂರ್ಣ ಪ್ರಮಾಣದ ಹಣ ಪಾವತಿಸುವ ಮೂಲಕ ಅವ್ಯವಹಾರ ನಡೆಸಿದ್ದು ಕ್ರಮ ಕೈಗೊಳ್ಳುವಲ್ಲಿ ಜಿಲ್ಲಾಧಿಕಾರಿಗಳು ಅಸಡ್ಡೆ ತೋರಿದ್ದಾರೆ.
ಈ ಹಿನ್ನೆಲೆಯಲ್ಲಿ ನಗರದ ವಿವಿಧ ಪ್ರಗತಿ ಪರ ಸಂಘಟನೆಗಳು ಡಿ.18ರಂದು ನಡೆಸಲುದ್ದೇಶಿಸಿರುವ ನಗರಸಭೆ ಮುತ್ತಿಗೆ ಕಾರ್ಯಕ್ರಮಕ್ಕೆ ತಮ್ಮ ಸಂಘಟನೆ ಬೆಂಬಲಿಸಲಿದೆ ಎಂದು ತಿಳಿಸಿದ್ದಾರೆ.
'ರಸ್ತಾ ರೋಕೋ ಬೆಂಬಲಿಸಿ'
ಸಿಂಧನೂರು: ನಗರಾಭಿವೃದ್ಧಿ ಹೋರಾಟ ಸಮಿತಿಯಿಂದ ನಗರದ ಕುಷ್ಟಗಿ ರಸ್ತೆ ಮತ್ತು ಹಳೆ ಬಜಾರ್ ರಸ್ತೆಯಲ್ಲಿ ಧೂಳಿನಿಂದ ಸಾರ್ವಜನಿಕರು ಪಡುತ್ತಿರುವ ತೊಂದರೆಯನ್ನು ನಿವಾರಿಸುವ ನಿಟ್ಟಿನಲ್ಲಿ ಸರ್ಕಾರದ ವಿಳಂಬ ನೀತಿಯನ್ನು ಪ್ರತಿಭಟಿಸಿ ಡಿ.17ರಂದು ರಸ್ತಾರೋಕೋ ಹಮ್ಮಿಕೊಂಡಿದ್ದು ಸಾರ್ವಜನಿಕರು, ವ್ಯಾಪಾರಸ್ಥರು, ವಿದ್ಯಾರ್ಥಿ ಯುವ ಜನರು ಬೆಂಬಲಿಸುವಂತೆ ನಗರಾಭಿವೃದ್ಧಿ ಹೋರಾಟ ಸಮಿತಿಯ ಪ್ರಧಾನ ಸಂಚಾಲಕ ಹನುಮನಗೌಡ ಬೆಳಗುರ್ಕಿ ಹಾಗೂ ಇತರ ಸಂಚಾಲಕರು ಮನವಿ ಮಾಡಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ವಿವಿಧ ವ್ಯಾಪಾರಿ ಸಂಘ-ಸಂಸ್ಥೆಗಳು ತಮ್ಮ ತಮ್ಮ ಸಂಘದ ಸಭೆಯನ್ನು ಕರೆದು ರಸ್ತಾರೋಕೋದಲ್ಲಿ ಭಾಗವಹಿಸಿ ರಸ್ತೆ ತಡೆಯನ್ನು ಯಶಸ್ವಿಗೊಳಿಸುವಂತೆ ಅವರು ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

