ಮಾಸಾಶನ ವಿಳಂಬ; ರೈತ ಸಂಘ ಧರಣಿ
ಕ.ಪ್ರ. ವಾರ್ತೆ, ಲಿಂಗಸ್ಗೂರು, ಡಿ.16
ತಾಲೂಕಿನ ಗುರುಗುಂಟಾ ಹೋಬಳಿ ವ್ಯಾಪ್ತಿಯ ಗೌಡೂರು ಹಾಗೂ ಕಡದರಗಡ್ಡಿ ಗ್ರಾಮಗಳ ಫಲಾನುಭವಿಗಳಿಗೆ ಮಾಸಾಶನ ನೀಡಿಕೆಯಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಸೋಮವಾರ ಗುರುಗುಂಟಾ ನಾಡತಹಸೀಲ್ದಾರ್ ಕಚೇರಿ ಮುಂದೆ ಧರಣಿ ನಡೆಸಲಾಯಿತು.
ಕಳೆದ 6 ತಿಂಗಳ ಹಿಂದೆ ತಹಸೀಲ್ದಾರ್ ನೇತೃತ್ವದಲ್ಲಿ ನಡೆಸಿದ ಲೋಕ ಅದಾಲತ್ ಸಂದರ್ಭದಲ್ಲಿ ಸಂಧ್ಯಾ ಸುರಕ್ಷಾ, ಅಂಗವಿಕಲ, ವೃದ್ಧಾಪ್ಯ, ವಿಧವಾ ವೇತನ ಸೇರಿದಂತೆ ವಿವಿಧ ಯೋಜನೆ ಫಲಾನುಭಿವಗಳಿಂದ ಅರ್ಜಿ ಪಡೆದ ನಂತರ ಅರ್ಹ ಫಲಾನುಭವಿಗಳಿಗೆ ಆದೇಶ ಪ್ರತಿ ನೀಡಲಾಗಿದೆ. ಆದರೆ ಇದುವರೆಗೆ ಮಾಸಾಶನ ಬಂದಿಲ್ಲ. ಈ ಬಗ್ಗೆ ಅಧಿಕಾರಿಗಳನ್ನು ವಿಚಾರಿಸಿದರೆ ಉಪಖಜಾನೆಗೆ ಹಣ ಮಂಜೂರಾತಿಗೆ ಕಳುಹಿಸಲಾಗಿದೆ ಎಂದು ಹೇಳಲಾಗುತ್ತಿದ್ದಾರೆ.
ಅಧಿಕಾರಿಗಳ ನಿರ್ಲಕ್ಷ್ಯ ಕಾರಣ: ಉಪ ಖಜಾನೆಯಲ್ಲಿ ವಿಚಾರಿಸಿದರೆ ನಾಡತಹಸೀಲ್ದಾರ್ ಕಚೇರಿಯಿಂದ ಆದೇಶ ಪ್ರತಿ ಬಂದಿಲ್ಲವೆಂದು ಹೇಳುತ್ತಿದ್ದಾರೆ. ನಾಡ ತಹಸೀಲ್ದಾರರು, ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ನಿರ್ಲಕ್ಷ್ಯದಿಂದ ಫಲಾನುಭವಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಧರಣಿಯಲ್ಲಿ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅಮರಣ್ಣ ಗುಡಿಹಾಳ, ಮುಖಂಡರಾದ ಸಿದ್ದೇಶ, ಭೀಮಣ್ಣ, ಮಲ್ಲಣ್ಣ ಕೋಳೂರು, ಈರಣ್ಣ, ಅಯ್ಯಣ್ಣ, ತಿಪ್ಪಣ್ಣ, ಶರಣಬಸವರ, ಶರಣೋಜಿ ಪವಾರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

