ರಾಯಚೂರು

'ಜೈವಿಕ ಇಂಧನ ಉತ್ಪಾದಿಸಿ'

Published On :

ಸಿಂಧನೂರು: ಬರಿದಾಗುತ್ತಿರುವ ನೈಸರ್ಗಿಕ ಇಂಧನದ ಬದಲಾಗಿ ಜೈವಿಕ ಇಂಧನ ಅಭಿವೃದ್ಧಿ ಯೋಜನೆ ಬಹಳಷ್ಟು ಮಹತ್ವದ್ದಾಗಿದ್ದು, ಮಹಿಳೆಯರು ನಿರುಪಯುಕ್ತ ಭೂಮಿಯಲ್ಲಿ ಜೈವಿಕ ಇಂಧನ ಉತ್ಪಾದಿಸಬಹುದಾದ ಮರಗಳನ್ನು ಬೆಳೆಸಬೇಕೆಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪಂಪನಗೌಡ ಸಲಹೆ ನೀಡಿದರು.
ತಾಲೂಕಿನ ಗುಂಜಳ್ಳಿ ಗ್ರಾಮದಲ್ಲಿ ಜಿಪಂ, ತಾಪಂ, ಗ್ರಾಮ್ಸ್ ಜಿಲ್ಲಾ ಲೀಡ್ಸ್ ಸಂಸ್ಥೆ ಹಾಗೂ ಸಾಧನಾ ಕ್ಷೇತ್ರ ಮಟ್ಟದ ಸ್ವಯಂ ಸೇವಾ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಜೈವಿಕ ಇಂಧನ ಅಭಿವೃದ್ಧಿ ಯೋಜನೆ ಅಡಿಯಲ್ಲಿ ನಡೆದ ಸ್ತ್ರೀ ಶಕ್ತಿ ಗುಂಪುಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯನಿ ಶೋಭಾ ಮಾತನಾಡಿ, ಈ ಯೋಜನೆಯು ತುಂಬಾ ಕುತೂಹಲಕರವಾಗಿದ್ದು, ಅಷ್ಟೇ ಪ್ರಯೋಜನಕಾರಿಯಾಗಿದೆ. ಜೈವಿಕ ಇಂಧನ ಉತ್ಪಾದಿಸುವ ಸಸಿಗಳನ್ನು ತಮ್ಮ ಶಾಲೆಯಲ್ಲಿ ಬೆಳೆಸುವ ಆಕಾಂಕ್ಷೆ ವ್ಯಕ್ತಪಡಿಸಿದರು.
ತಾಲೂಕಿನ ಶಿಶುಅಭಿವೃದ್ಧಿ ಇಲಾಖೆಯ ಗುಂಜಳ್ಳಿ ಗ್ರಾಮ ವ್ಯಾಪ್ತಿಯ ಮೇಲ್ವಿಚಾರಕಿ ಸರಿತಾ ಯೋಜನೆಯ ಉದ್ದೇಶದ ಬಗ್ಗೆ ಮಹಿಳೆಯರಿಗೆ ವಿವರಣೆ ನೀಡಿದರು. ಗುಂಜಳ್ಳಿ ಗ್ರಾಪಂ ಅಧ್ಯಕ್ಷೆ ಹುಲಿಗೆಮ್ಮ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಮೌಲಾಸಾಬ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. 40ರಿಂದ 45 ಜನ ಮಹಿಳಾ ಗುಂಪಿನ ಸದಸ್ಯರು ಉಪಸ್ಥಿತರಿದ್ದರು. ಸಾಧನಾ ಸಂಸ್ಥೆಯ ಯೋಜನಾ ಸಂಯೋಜಕರಾದ ಇಬ್ರಾಹಿಂ ಪಾಟೀಲ್ ಕಾರ್ಯಕ್ರಮ ನಿರ್ವಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.