ಚಿತ್ತಾಪುರ ಮಾದರಿ ಕ್ಷೇತ್ರಕ್ಕೆ ಪಣ ತೊಡಿ
ಕ.ಪ್ರ. ವಾರ್ತೆ ಚಿತ್ತಾಪುರ ಡಿ.18
ಪಟ್ಟಣಕ್ಕೆ ಮೂಲ ಸೌಲಭ್ಯ ಒದಗಿಸಲು ಪ್ರಥಮ ಆದ್ಯತೆ ನೀಡಿ, ಮಾದರಿ ಕ್ಷೇತ್ರವನ್ನಾಗಿ ಮಾಡಲು ಕಾರ್ಯಪ್ರವೃತ್ತರಾಗೋಣ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದರು.
ಪುರಸಭೆ ಕಾರ್ಯಾಲಯದಲ್ಲಿ ಬುಧವಾರ ಪುರಸಭೆ ವತಿಯಿಂದ ನೀಡಿದ ಪೌರ ಸನ್ಮಾನ ಸ್ವೀಕರಿಸಿ ಮಾತನಾಡಿ, ಎಲ್ಲ ಚುನಾಯಿತ ಸದಸ್ಯರಿಗೆ ಮತದಾರರು ಪಟ್ಟಣ ಅಭಿವೃದ್ಧಿ ಮಾಡಲು ಮತ ನೀಡಿದ್ದು, ನಾವು ಅವರ ನಂಬಿಕೆ ಉಳಿಸಿಕೊಳ್ಳಲು ಶಕ್ತಿಮೀರಿ ಅವರ ಸಮಸ್ಯೆ ಪರಿಹರಿಸಲು ಮತ್ತು ಮಾದರಿ ಪಟ್ಟಣವನ್ನಾಗಿ ಮಾಡಲು ಪ್ರಯತ್ನಿಸಬೇಕೆಂದು ತಿಳಿಸಿದರು.
ಶ್ವೇತಪತ್ರ ಹೊರಡಿಸಿ- ಸವಾಲು: ಮಾಜಿ ಸಚಿವರಾದ ರೇವು ನಾಯಕ ಬೆಳಮಗಿ ಹಾಗೂ ಮಾಜಿ ಶಾಸಕ ವಾಲ್ಮಿಕಿ ನಾಯಕ ಅವರು ನಾನು ಕ್ಷೇತ್ರಕ್ಕಾಗಿ ಯಾವುದೇ ಅಭಿವೃದ್ಧಿ ಕಾರ್ಯವನ್ನು ಮಾಡುತ್ತಿಲ್ಲ ಎಂದು ಅಪಪ್ರಚಾರ ಮಾಡುತ್ತಿರುವುದು ಸರಿಯಲ್ಲ. ಅವರಿಗೆ ಧೈರ್ಯ ಇದ್ದರೆ ಅವರು ತಮ್ಮ ಸರ್ಕಾರದ ಅವಧಿಯಲ್ಲಿ ಕ್ಷೇತ್ರಕ್ಕೆ ನೀಡಿದ ಕೊಡುಗೆ ಮತ್ತು ನನ್ನ ಆರು ತಿಂಗಳ ಅವಧಿಯಲ್ಲಿ ಕ್ಷೇತ್ರಕ್ಕೆ ನೀಡಿದ ಕೊಡುಗೆ ಕುರಿತು ಬಹಿರಂಗ ಚರ್ಚೆಗೆ ಬನ್ನಿ. ಇಲ್ಲದಿದ್ದಲ್ಲಿ ಶ್ವೇತ ಪತ್ರ ಹೊರಡಿಸಿ. ಆವಾಗ ಯಾರು ಕ್ಷೇತ್ರಕ್ಕಾಗಿ ಎಷ್ಟು ಅಭಿವೃದ್ಧಿ ಮಾಡಿದ್ದಾರೆ ಎನ್ನುವುದು ಜನತೆಗೆ ಗೊತ್ತಾಗುತ್ತದೆ ಎಂದು ಸವಾಲು ಹಾಕಿದರು.
ಜನರೇ ಬುದ್ಧಿ ಕಲಿಸ್ತಾರೆ: ತಾವು ಮಾದರಿ ಕ್ಷೇತ್ರ ಮಾಡುವ ಗುರಿ ಹೊಂದಿದ್ದು, ಹಂತ ಹಂತವಾಗಿ ಅಭಿವೃದ್ಧಿ ಕೈಗೊಳ್ಳಲು ಸಾಧ್ಯ. ಒಂದೇ ಸಲಕ್ಕೆ ಎಲ್ಲ ಅಭಿವೃದ್ಧಿ ಮಾಡುತ್ತೇನೆಂದು ಹೇಳಲು ಸಾಧ್ಯವಿಲ್ಲ. ಇದು ಗೊತ್ತಿದ್ದೂ ಪ್ರತಿಪಕ್ಷದವರು ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜನರೇ ಅವರಿಗೆ ಬುದ್ಧಿ ಕಲಿಸುತ್ತಾರೆಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಮಾಜಿ ಜಿಪಂ ಸದಸ್ಯ ನಾಗರೆಡ್ಡಿ ಪಾಟೀಲ್ ಕರದಾಳ, ಮುಕ್ತಾರ ಪಟೇಲ್ ಮಾತನಾಡಿದರು. ಪುರಸಭೆ ಅಧ್ಯಕ್ಷ ಶಿವಕಾಂತ ಬೆಣ್ಣೂರಕರ್, ಉಪಾಧ್ಯಕ್ಷ ನಾಗರಾಜ ಕಡಬೂರ, ಎಲ್ಲ ಪುರಸಭೆ ಸದಸ್ಯರು, ಮುಖಂಡರಾದ ಸೋಮಶೇಖರ ಪಾಟೀಲ್ ಬೆಳಗುಂಪಾ, ಡಾ. ಪ್ರಭುರಾಜ ಕಾಂತಾ, ಶ್ರೀನಿವಾಸ ಸಗರ, ಜಾಫರ ಪಟೇಲ್, ಅಜಿಜ್ ಶೇಠ ರಾವೂರ, ನಾಗಯ್ಯ ಗುತ್ತೇದಾರ, ಪುರಸಭೆ ಮಾಜಿ ಅಧ್ಯಕ್ಷರಾದ ಪಾಶಾಮಿಯ್ಯ ಖುರೇಶಿ, ಶಿಲಾ ಕಾಶಿ, ಈರಪ್ಪ ಬೋವಿ, ರವೀಂದ್ರ ಸಜ್ಜನಶೆಟ್ಟಿ, ಶರಣಪ್ಪ ನಾಟೀಕಾರ, ಶಿವಶರಣಪ್ಪ ಹಾಬಾಳ, ನರಸಯ್ಯ ಗೌಡ, ಮಲ್ಲಿಕಾರ್ಜುನ ಮೂಡಬೂಳಕರ್, ವೆಂಕಟೇಶ, ಪ್ರತಾಪ ಮುಕ್ತೆದಾರ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

