ರಾಯಚೂರು

ವಿಕಲಚೇತನರಿಗೆ ಸೌಲಭ್ಯ ಒದಗಿಸಲು ಬದ್ಧ: ಶಾಸಕ

Published On :

ಕ.ಪ್ರ. ವಾರ್ತೆ ದೇವದುರ್ಗ ಡಿ.18
ವಿಕಲಚೇತನರಿಗೆ ಎಲ್ಲರಂತೆ ಬದುಕಲು ಸಮಾನ ಹಕ್ಕಿದೆ. ಸಮಾಜದಲ್ಲಿರುವ ಎಲ್ಲರೂ ಅವರನ್ನು ಗೌರವಯುತವಾಗಿ ಕಾಣುವಂತೆ ಶಾಸಕ ಎ.ವೆಂಕಟೇಶ ನಾಯಕ ತಿಳಿಸಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಬುಧವಾರ ಆರೋಗ್ಯ ಇಲಾಖೆ, ಮತ್ತು ಸಾರ್ವಜನಿಕ ಆಸ್ಪತ್ರೆ ದೇವದುರ್ಗ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿಕೆಗೆ ಸಂಬಂಧಿಸಿದ ಆರೋಗ್ಯ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮನೆಯಲ್ಲೇ ತಪಾಸಣೆ: ತಾಲೂಕಿನ ವಿಕಲಚೇತನರು ತಮ್ಮ ಗುರುತಿನ ಚೀಟಿ ಪಡೆಯಲು ದೂರದ ಜಿಲ್ಲಾ ಕೇಂದ್ರಕ್ಕೆ ಹೋಗುವಂತಾಗಿತ್ತು. ಅದರಿಂದ ಸಾಕಷ್ಟು ಅಡಚಣೆಯಾಗುತ್ತಿತ್ತು. ಈ ಸಮಸ್ಯೆ ನಿವಾರಣೆಗೆ ಜಿಲ್ಲಾ ಕೇಂದ್ರದ ವೈದ್ಯಾಧಿಕಾರಿಗಳನ್ನು ಕರೆತಂದು ತಪಾಸಣೆ ಮಾಡಿ ಮನೆ ಬಾಗಿಲಿಗೆ ಗುರುತಿನ ಚೀಟಿ ತಲುಪಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು. ಸರ್ಕಾರದಿಂದ ವಿಕಲಚೇತನರಿಗೆ ನೀಡುವ ಎಲ್ಲ ಸವಲತ್ತುಗಳನ್ನು ಪ್ರಾಮಾಣಿಕವಾಗಿ ಅವರಿಗೆ ತಲುಪಿಸುವ ಕಾರ್ಯ ಮಾಡುವುದಾಗಿ ಭರವಸೆ ನೀಡಿದ ಅವರು, ತಮ್ಮ ಅನುದಾನದಲ್ಲಿ ವಿಕಲಚೇತನರಿಗಾಗಿ 10 ಲಕ್ಷ ಮೀಸಲಿಟ್ಟಿರುವುದಾಗಿ ತಿಳಿಸಿದರು.
ಪುರಸಭೆ ಅಧ್ಯಕ್ಷ ಫಕ್ರೋದ್ದೀನ್ ಗೌರಂಪೇಟ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಭೀಮನಗೌಡ ನಾಗಡದಿನ್ನಿ, ಬಸಯ್ಯ ಶಾಖೆ, ಮಹಿಳಾ ಘಟಕದ ಅಧ್ಯಕ್ಷ ಕರೆಮ್ಮ ಗೋಪಾಲಕೃಷ್ಣ, ತಾಪಂ ಮಾಜಿ ಅಧ್ಯಕ್ಷ ಸಿದ್ದನಗೌಡ ಮೂಡ್ಲಗುಂಡ, ತಾಲೂಕು ಯುವ ಘಟಕದ ಅಧ್ಯಕ್ಷ ಶೇಖ್ ಮುನ್ನಾಭಾಯಿ, ಮಹ್ಮದ್ ಫಾರೂಕ್ ಅಹ್ಮದ್, ತಹಸೀಲ್ದಾರ್ ಬಸಲಿಂಗಪ್ಪ ನೈಕೋಡಿ, ತಾಲೂಕು ವೈದ್ಯಾಧಿಕಾರಿ ಡಾ. ಚಂದ್ರಕಾಂತ, ಡಾ. ಸುರೇಶ ಗೌಡ ಸೇರಿ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.