ಸುದ್ದಿ ಸಂಕ್ಷೇಪ
ಪುರಸಭೆ; ಸ್ಥಾಯಿ ಸಮಿತಿಗೆ ನೇಮಕ
ದೇವದುರ್ಗ: ಸ್ಥಳೀಯ ಪುರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಪುರಸಭೆ ಸದಸ್ಯ ರಂಗಪ್ಪ ನಾಯಕ ಅವಿರೋಧವಾಗಿ ಆಯ್ಕೆಯಾದರು. ಪಟ್ಟಣದ ಪುರಸಭೆಯಲ್ಲಿ ಬುಧವಾರ ಶಹರ್ ರೋಜಗಾರ್ ಕಟ್ಟಡದಲ್ಲಿ ಆಯೋಜಿಸಿದ್ದ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ರಂಗಪ್ಪ ನಾಯಕ ಅವರನ್ನು ಚಂದ್ರಶೇಖರ ಚಲುವಾದಿ ಸೂಚಿಸಿದರು. ಶ್ರೀನಿವಾಸ ಅಬಕಾರಿ ಅನುಮೋದಿಸಿದರು. ಇದೇ ಸಂದರ್ಭ 11 ಜನರನ್ನು ಸ್ಥಾಯಿಸಮಿತಿ ಸದಸ್ಯರಾಗಿ ನೇಮಿಸಲಾಯಿತು. ಪುರಸಭೆ ಅಧ್ಯಕ್ಷ ಫಕ್ರೋದ್ದೀನ್ ಗೌರಂಪೇಟ, ತಹಸೀಲ್ದಾರ್ ಹಾಗೂ ಪುರಸಭೆ ಆಡಳಿತಾಧಿಕಾರಿ ಬಸಲಿಂಗಪ್ಪ ನೈಕೋಡಿ, ಪುರಸಭೆ ಕಂದಾಯ ನಿರೀಕ್ಷಕರಾದ ಗೋಪಾಲ ಕೃಷ್ಣ, ಪುರಸಭೆ ಉಪಾಧ್ಯಕ್ಷ ನಾಗಪ್ಪ ಉಪ್ಪಾರ, ಸದ್ಯರಾದ ವೆಂಕಟೇಶ ಸೋಮಕಾರ, ಶಿವಪ್ಪ ಜಕ್ಕಲ, ಮರಿಯಂಬೀ ಶೇಖ್ ಮುನ್ನಾಭಾಯ್, ಯಶೋಧಾ ಸ್ವಾಮಿ, ತಾಹೇರಾ ಬೇಗಂ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಕೋರ್ಟ್ ಟ್ರೈಲ್
ರಾಯಚೂರು: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಹಾಗೂ ವೈದ್ಯಕೀಯ ಇಲಾಖೆ ಮತ್ತು ನವೋದಯ ಮೆಡಿಕಲ್ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಡಿ.21ರಂದು ಲೈವ್ ಮಾಕ್ ಕೋರ್ಟ್ ಟ್ರೈಲ್ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 9.30ಕ್ಕೆ ನಗರದ ನವೋದಯ ಮೆಡಿಕಲ್ ಕಾಲೇಜು ಕೋರ್ಟ್ ಹಾಲ್ನಲ್ಲಿ ಕಾರ್ಯಕ್ರಮವನ್ನು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಪಿ.ಜಿ.ಎಂ. ಪಾಟೀಲ್ ಉದ್ಘಾಟಿಸಲಿದ್ದಾರೆ. ನವೋದಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್. ಆರ್. ರೆಡ್ಡಿ ಅಧ್ಯಕ್ಷತೆ ವಹಿಸಲಿದ್ದಾರೆ. ರಿಜಿಸ್ಟ್ರಾರ್ ಡಾ. ಶ್ರೀನಿವಾಸ, ನಿರ್ದೇಶಕ ಎಸ್.ಆರ್. ಹೆಗಡೆ, ವಿಜಯಚಂದ್ರ, ರಾಜಶೇಖರ, ವಿ.ಎನ್. ಬಿರಾದಾರ್ ಮತ್ತು ವಕೀಲರ ಸಂಘದ ಅಧ್ಯಕ್ಷ ಭಾನುರಾಜ್ ಹಾಗೂ ಪ್ರಭುದೇವ ಪಾಟೀಲ್ ಭಾಗವಹಿಸಲಿದ್ದಾರೆ ಎಂದು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹ್ಮದ್ ಮುಜಾಹಿದ್ ಉಲ್ಲಾ ತಿಳಿಸಿದ್ದಾರೆ.
ಇಂದು ಕಾರ್ಯಾಗಾರ
ರಾಯಚೂರು: ಬೆಂಗಳೂರಿನ ದೂರಸಂಪರ್ಕ ನಿಯಂತ್ರಣಾ ಪ್ರಾಧಿಕಾರದಿಂದ ದೂರಸಂಪರ್ಕ ಗ್ರಾಹಕರ ಹಕ್ಕು ಮತ್ತು ಸವಲತ್ತುಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಡಿ.19ರಂದು ನಗರದಲ್ಲಿ ಆಯೋಜಿಸಲಾಗಿದೆ. ನಗರದ ನೃಪತುಂಗ ಹೊಟೇಲ್ನಲ್ಲಿ ಡಿ.19ರ ಮಧ್ಯಾಹ್ನ 2.30ಕ್ಕೆ ಕಾರ್ಯಾಗಾರ ನಡೆಯಲಿದ್ದು, ಕರ್ನಾಟಕ ಮತ್ತು ಕೇರಳದ ಟ್ರಾಯ್ ಪ್ರಾದೇಶಿಕ ಮುಖ್ಯಸ್ಥ ಡಾ. ಸಿಬಿಚೆನ್ ಕೆ. ಮ್ಯಾಥ್ಯೂ ಗ್ರಾಹಕರ ಹಿತಾಸಕ್ತಿ ಕಾಪಾಡಲು ಟ್ರಾಯ್ ತೆಗೆದುಕೊಂಡ ಕ್ರಮಗಳ ಬಗ್ಗೆ, ಗ್ರಾಹಕರ ಹಕ್ಕು ಸವಲತ್ತುಗಳ ಬಗ್ಗೆ ಮತ್ತು ಸೇವಾ ಸಂಸ್ಥೆಗಳು ತಮ್ಮ ಗ್ರಾಹಕರಿಗೆ ಸೇವೆಯನ್ನು ಹೇಗೆ ಪೂರೈಸಬೇಕು ಎಂಬುದರ ಬಗ್ಗೆ ಮಾತನಾಡಲಿದ್ದಾರೆಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

