ಸುದ್ದಿ ಸಂಕ್ಷೇಪ
ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ
ದೇವದುರ್ಗ: ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಶಾಸಕ ಎ.ವೆಂಕಟೇಶ ನಾಯಕ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಪಟ್ಟಣದಲ್ಲಿ ಇತ್ತೀಚೆಗೆ ಶ್ರೀ ಸಿದ್ದಯ್ಯ ಹವಲ್ದಾರ್ ಸರ್ಕಾರಿ ಪ್ರೌಢ ಶಾಲೆ, ಆದರ್ಶ ಶಾಲೆ, ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಇವರುಗಳ ಸಂಯುಕ್ತಾಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸೈಕಲ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ದೊರೆತ ಯೋಜನೆಗಳ ಲಾಭ ಪಡೆದು ಜ್ಞಾನಾರ್ಜನೆ ಮಾಡಿಕೊಳ್ಳುವಂತೆ ಮನವಿ ಮಾಡಿದರು. ಬಿಇಒ ಎಚ್.ಡಿ. ಹುನಗುಂದ ಶಿಕ್ಷಣ ಇಲಾಖೆಯ ಯೋಜನೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧ್ಯಕ್ಷತೆಯನ್ನು ಅರಕೇರಾ ಗ್ರಾಪಂ ಅಧ್ಯಕ್ಷ ನೀಲಮ್ಮ ವಹಿಸಿದ್ದರು. ಚನ್ನವೀರಯ್ಯಸ್ವಾಮಿ ಹಿರೇಮಠ ಮಲ್ಲಪ್ಪ ಕುರುಕುಂದಿ, ಚಂದ್ರಶೇಖರ ಬಂಗಿ, ಶಿವರಾಜ ನಾಗೋಲಿ, ಹನುಮಂತ ಉಪ್ಪಾರ, ಹನುಮಂತ್ರಾಯ ಗಾಲಿ ಸೇರಿ ಅನೇಕರಿದ್ದರು.
ಟ್ರ್ಯಾಕ್ಟರ್ಗೆ ಸಿಲುಕಿ ವ್ಯಕ್ತಿ ಸಾವು
ರಾಯಚೂರು: ಮಾನವಿ ತಾಲೂಕಿನ ಸೈದಾಪುರದಲ್ಲಿ ಟ್ರ್ಯಾಕ್ಟರ್ಗೆ ಸಿಲುಕಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಮೃತನನ್ನು ಲಾಲೇಸಾಬ್ ಎಂದು ಗುರುತಿಸಲಾಗಿದೆ. ಈತ ಟ್ರ್ಯಾಕ್ಟರ್ನಲ್ಲಿ ಕಲ್ಲು ತುಂಬಿಕೊಂಡು ಸಾಗಲು ನಿಲುಗಡೆ ಮಾಡಿದ್ದು, ಟ್ರ್ಯಾಕ್ಟರ್ ಮುಂದೆ ಸಾಗಿದ್ದರಿಂದ ಅದನ್ನು ನಿಲ್ಲಿಸಲು ಬ್ರೇಕ್ ಮೇಲೆ ಕಾಲಿಡುವ ಪ್ರಯತ್ನದಲ್ಲಿ ಅದರಡಿ ಸಿಲುಕಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮೃತಪಟ್ಟಿದ್ದಾನೆ. ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

