ರಾಯಚೂರು

ಸುದ್ದಿ ಸಂಕ್ಷೇಪ

Published On :

ಇಂದಿನಿಂದ ಸ್ಕೌಟ್ಸ್, ಗೈಡ್ಸ್ ಉತ್ಸವ
ರಾಯಚೂರು: ಮಾನವಿ ಪಟ್ಟಣದ ಕಾಕತೀಯ ಶಾಲೆಯಲ್ಲಿ ಡಿ.19ರಿಂದ ಆರಂಭಗೊಂಡಿರುವ 36ನೇ ರಾಜ್ಯಮಟ್ಟದ ಕಬ್ ಮತ್ತು ಬುಲ್ ಬುಲ್ ಉತ್ಸವವು ಡಿ.23ರವರೆಗೆ ನಡೆಯಲಿದೆ. ಡಿ.19ರಂದು ಉತ್ಸವಕ್ಕೆ ಆಗಮಿಸುವವರ ನೋಂದಣಿ ನಡೆಯಲಿದ್ದು, 5 ದಿನ ನಡೆಯುವ ಉತ್ಸವದಲ್ಲಿ ರಾಜ್ಯದ ನಾನಾ ಜಿಲ್ಲೆಗಳಿಂದ 1 ಸಾವಿರಕ್ಕೂ ಹೆಚ್ಚಿನ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಮತ್ತು 200 ಜನ ಸಿಬ್ಬಂದಿ ಪಾಲ್ಗೊಳ್ಳಲಿದ್ದಾರೆ. ಡಿ.20ರಂದು ಬೆ.10ಕ್ಕೆ ರಾಜ್ಯ ಮಟ್ಟದ ಕಬ್ ಮತ್ತು ಬುಲ್ ಬುಲ್ ಉತ್ಸವದ ಉದ್ಘಾಟನೆ ನಡೆಯಲಿದ್ದು, ಸಾನ್ನಿಧ್ಯವನ್ನು ಕಲ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ವಹಿಸುವರು. ಮಾಜಿ ಶಾಸಕ ಹಾಗೂ ಉತ್ಸವದ ಸ್ವಾಗತ ಸಮಿತಿಯ ಅಧ್ಯಕ್ಷ ಎನ್.ಎಸ್. ಬೋಸರಾಜು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ಹಂಪಯ್ಯನಾಯಕ ವಹಿಸುವರು. ಡಿ.22ರಂದು ಸಮಾರೋಪ ಸಭೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಸ್ಕೌಟ್ಸ್ ಮತ್ತು ಗೈಡ್ಸ್‌ನ ರಾಜ್ಯ ಆಯುಕ್ತ ಕೊಂಡಜ್ಬಿ ಷಣ್ಮುಖಪ್ಪ ಆಗಮಿಸಲಿದ್ದಾರೆ.
ಮಾನಸಿಕ ಅಸ್ವಸ್ಥೆ ಆತ್ಮಹತ್ಯೆ
ರಾಯಚೂರು: ಲಿಂಗಸ್ಗೂರು ತಾಲೂಕಿನ ಮಸ್ಕಿ ಪಟ್ಟಣದಲ್ಲಿ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತಳನ್ನು ಬಸಮ್ಮ(28) ಎಂದು ಗುರುತಿಸಲಾಗಿದೆ. ಈಕೆ ಜೀವನದಲ್ಲಿ ಜಿಗುಪ್ಸೆಗೊಂಡು ಪಟ್ಟಣದ ಬಳಿಯ ಎಡದಂಡೆ ಕಾಲುವೆಯಲ್ಲಿ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತಳ ಶವವು ಮಾನವಿ ತಾಲೂಕಿನ ಕವಿತಾಳ ಗ್ರಾಮದ ಬಳಿ ಕಾಲುವೆಯಲ್ಲಿ ಪತ್ತೆಯಾಗಿದೆ. ಈ ಕುರಿತು ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.