ರಾಯಚೂರು

ಕ್ರಿಸ್ಮಸ್: ನಾಳೆ ಸರ್ವಧರ್ಮ ಸಮ್ಮೇಳನ

Published On :

ಮುದಗಲ್: ಕ್ರಿಸ್ಮಸ್ ಹಬ್ಬದ ಅಂಗವಾಗಿ ಸ್ಥಳೀಯ ಚರ್ಚ್ನಲ್ಲಿ ಸರ್ವಧರ್ಮ ಸಮ್ಮೇಳನ ನಡೆಸಲಾಗುತ್ತದೆ ಎಂದು ಕ್ಯಾಥೋಲಿಕ್ ಸಲಹಾ ಸಮಿತಿ ಸದಸ್ಯ ಫಾದರ್ ಎಂ.ಎ. ಅಲ್ಪೋನ್ಸ್ ಹೇಳಿದರು.
ಸ್ಥಳೀಯ ಚರ್ಚ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಡಿ. 22ರಿಂದ ಕ್ರಿಸ್ಮಸ್ ಕಾರ್ಯಕ್ರಮಗಳು ಆರಂಭವಾಗಲಿವೆ. ಅಂದು ಚರ್ಚ್ ಆವರಣದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ಧರ್ಮಗಳ ಮುಖ್ಯಸ್ಥರನ್ನು ಸಭೆಗೆ ಕರೆದು ಧರ್ಮದಸಾರಗಳನ್ನು ಜನರಿಗೆ ತಿಳಿಸುವ ಕಾರ್ಯ ಮಾಡಲಾಗುತ್ತಿದೆ. ವಿಶ್ವ ಶಾಂತಿಗಾಗಿ ಪ್ರಾರ್ಥನೆ ಮಾಡಲಾಗುತ್ತಿದೆ. ಕಾರ್ಯಕ್ರಮಕ್ಕೆ ಎಲ್ಲಾ ಧರ್ಮಗಳ ಜನರನ್ನು ಅಹ್ವಾನಿಸಲಾಗುತ್ತಿದೆ. ಚುನಾಯಿತ ಜನಪ್ರತಿನಿಧಿಗಳಿಗೆ ಸನ್ಮಾನ ಗೌರವ ಸಮರ್ಪಣೆ ಮಾಡಲಾಗುತ್ತದೆ. ಡಿ. 25ರಂದು ಕ್ರಿಸ್ಮಸ್ ಕಾರ್ಯಕ್ರಮಗಳು, ವಿಶೇಷ ಕಾರ್ಯಕ್ರಮಗಳು ಜರುಗಲಿವೆ ಎಂದರು.
ಜ. 6ರಂದು ಮೂರು ರಾಯರ ಹಬ್ಬವನ್ನು ಆಚರಣೆ ಮಾಡಲಾಗುತ್ತಿದ್ದು, ಯೇಸು ಸ್ವಾಮಿಯ ಹುಟ್ಟು ಹಬ್ಬವಾಗಿದ್ದರಿಂದ ವಿಶೇಷ ಪೂಜಾ ಕಾರ್ಯಕ್ರಮಗಳು, ಮೂರ್ತಿ ಮೆರವಣಿಗೆಯನ್ನು ನಡೆಸಲಾಗುತ್ತದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.