ರಾಯಚೂರು

ಗ್ರಾಮೀಣ ಮಕ್ಕಳ ಪ್ರತಿಭೆ ಅನಾವರಣ

Published On :

ಮುದಗಲ್: ಪ್ರತಿಭಾ ಕಾರಂಜಿ ಸರಕಾರ ಮಟ್ಟದ ಕಾರ್ಯಕ್ರಮವಾಗದೇ ಗ್ರಾಮೀಣ ಭಾಗದ ಮಕ್ಕಳ ಪ್ರತಿಭೆ ಅನಾವರಣದ ವೇದಿಕೆಯಾಗಬೇಕೆಂದು ನಾಗಲಾಪುರ ಸಿಆರ್ಸಿ ವೀರಯ್ಯ ಸ್ವಾಮಿ ಅಭಿಪ್ರಾಯಪಟ್ಟರು.
ಸಮೀಪದ ಛತ್ತರ ರಾಮಜಿ ನಾಯ್ಕ ತಾಂಡಾದಲ್ಲಿ ಹಮ್ಮಿಕೊಳ್ಳಲಾಗಿದ್ದ 2013-14ನೇ ಸಾಲಿನ ನಾಗಲಾಪುರ ಸಿಆರ್ಸಿ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಕೇವಲ ಓದು-ಬರಹದಲ್ಲಿ ಮುಂದೇ ಬರುವುದಲ್ಲದೇ ಪಠ್ಯೇತರ ಚಟುವಟಿಕೆಗಳಲ್ಲಿಯೂ ಮುಂದೆ ಬರಬೇಕು ಎಂದರು. ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ನಾಗಲಾಪುರ ಗ್ರಾ.ಪಂ. ಅಧ್ಯಕ್ಷೆ ಅನುಸೂಯ ಗ್ಯಾನನಗೌಡ ಉದ್ಘಾಟಿಸಿದರು.
ಎಸ್ಡಿಎಂಸಿ ಅಧ್ಯಕ್ಷ ಕ್ಷತ್ರೇಶ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರತಿಭಾ ಕಾರಂಜಿಯಲ್ಲಿ ಒಟ್ಟು 16 ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಿದರು. ತಾ.ಪಂ. ಮಾಜಿ ಸದಸ್ಯೆ ರಿಂದಾಬಾಯಿ ಕೃಷ್ಣ ನಾಯ್ಕ, ಗ್ರಾ.ಪಂ. ಸದಸ್ಯ ವಿಜಯ್ ಇಲಕಲ್ಲ, ಮುಖ್ಯಗುರು ರಾಯಗುಂಡಪ್ಪ ಮುಖಂಡರಾದ ತಿಮ್ಮಣ್ಣ, ಎಸ್.ಎಲ್. ನಾಯ್ಕ, ರಾಮಣ್ಣ ದಳಪತಿ, ನೀಲಪ್ಪ ಅಂಗಡಿ, ಶಂಕ್ರಪ್ಪ, ವಿರೇಶ ಇದ್ದರು.

'ಪತ್ರಿಕೋದ್ಯಮ ರತ್ನ'

ಲಿಂಗಸ್ಗೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದಿಂದ ಕೊಡಮಾಡುವ ಪತ್ರಿಕೋದ್ಯಮ ರತ್ನ ರಾಜ್ಯ ಪ್ರಶಸ್ತಿಯನ್ನು ಲಿಂಗಸ್ಗೂರು ಪತ್ರಕರ್ತ ಮಹ್ಮದ್ ಖಾಜಾ ಹುಸೇನ್ರಿಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ವಿತರಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.