ರಾಯಚೂರು

ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ

Published On :

ಸಿಂಧನೂರು: ತಾಲೂಕಿನ ಅಲಬನೂರು ದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣಾ ಕಾರ್ಯಕ್ರಮ ಜರುಗಿತು.ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಿದ ಗ್ರಾಪಂ ಅಧ್ಯಕ್ಷೆ ಪೂರ್ಣಮ್ಮ ಮಾತನಾಡಿ, ಶೈಕ್ಷಣಿಕ ಅಭಿವೃದ್ಧಿಗೆ ಸರ್ಕಾರ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ವಿದ್ಯಾರ್ಥಿಗಳು ಯೋಜನೆಗಳನ್ನು ಸರಿಯಾಗಿ ಬಳಸಿಕೊಂಡು ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳಬೇಕು. ಉತ್ತಮ ಶಿಕ್ಷಣ ಪಡೆದರೆ ಮಾತ್ರ ಏನನ್ನಾದರೂ ಸಾಧಿಸಲು ಸಾಧ್ಯವೆಂದು ಹೇಳಿದರು.ಎಸ್ಡಿಎಂಸಿ ಅಧ್ಯಕ್ಷ ಮಾತಂಗಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಸ್ಡಿಎಂಸಿ ಉಪಾಧ್ಯಕ್ಷೆ ಕವಿತಾ, ಗ್ರಾಪಂ ಸದಸ್ಯರಾದ ಮಾನಪ್ಪ, ಮುಖ್ಯಗುರು ಕಲ್ಲನಗೌಡ ಹಿರೇಗೌಡ್ರು ಉಪಸ್ಥಿತರಿದ್ದರು. ಶಿಕ್ಷಕ ಮಾದೇಶ ನಿರೂಪಿಸಿದರು. ಲೋಕೇಶ ಸ್ವಾಗತಿಸಿದರು. ಮಲ್ಲಪ್ಪ ಸಿಆರ್ಪಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮಕ್ಕಳ ಪ್ರತಿಭೆ ಪ್ರೋತ್ಸಾಹಿಸಲು ಕರೆ
ಸಿಂಧನೂರು: ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರಹಾಕಲು ಪ್ರತಿಭಾ ಕಾರಂಜಿ ಕಾರ್ಯಕ್ರಮವು ಉತ್ತಮ ವೇದಿಕೆಯಾಗಿದೆ. ಶಿಕ್ಷಕರು ಸೂಕ್ತ ಮಾರ್ಗದರ್ಶನದ ಮೂಲಕ ಆದರ್ಶವಂತರನ್ನಾಗಿ ಮಾಡಬೇಕೆಂದು ಜಿಪಂ ಸದಸ್ಯೆ ಬಸಮ್ಮ ಕುಂಟೋಜಿ ಸಲಹೆ ನೀಡಿದರು. ತಾಲೂಕಿನ ಕಲಮಂಗಿ ಗ್ರಾಮದಲ್ಲಿ ಕಲಮಂಗಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ಡಿಂಸಿ ಅಧ್ಯಕ್ಷ ದಯಾನಂದ ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಸದಸ್ಯೆ ಆದಮ್ಮ ನಾಗನಗೌಡ, ಸರ್ಕಾರಿ ಪ್ರೌಢಶಾಲೆ  ಮುಖ್ಯಗುರು ಪ್ರಕಾಶ, ಪ್ರಾಥಮಿಕ ಶಾಲೆಯ ಮುಖ್ಯಗುರು ಕೆ.ಶರಣಪ್ಪ, ಸಿಆರ್ಪಿ ತಿಪ್ಪಣ್ಣ ನೈನಾಪೂರ, ಗ್ರಾಪಂ ಸದಸ್ಯರು, ವಿವಿಧ ಶಾಲೆ ಮುಖ್ಯಗುರುಗಳು ಸಹಶಿಕ್ಷಕರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.