ಸೇವಾ ಮನೋಭಾವಕ್ಕೆ ಸ್ಕೌಟ್ಸ್, ಗೈಡ್ಸ್ ಸಹಕಾರಿ
ಕ.ಪ್ರ. ವಾರ್ತೆ ರಾಯಚೂರು ಡಿ.20
ಶಿಸ್ತು, ಸಂಘಟನೆ ಮತ್ತು ಸೇವಾ ಮನೋಭಾವ ಮೂಡಿಸುವಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ನೆರವಾಗಲಿದೆ ಎಂದು ಮಾಜಿ ಶಾಸಕ, ರಾಜ್ಯಮಟ್ಟದ ಉತ್ಸವ ಸಮಿತಿ ಅಧ್ಯಕ್ಷ ಎನ್.ಎಸ್. ಬೋಸರಾಜು ಹೇಳಿದರು.
ಮಾನವಿ ಪಟ್ಟಣದ ಕಾಕತೀಯ ಶಾಲೆಯಲ್ಲಿ ಶುಕ್ರವಾರ ಸಾರ್ವಜನಿಕ ಶಿಕ್ಷಣ ಇಲಾಖೆ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಮತ್ತು ರಾಯಚೂರು ಜಿಲ್ಲಾ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆಯಿಂದ ಆಯೋಜಿಸಿದ್ದ 36ನೇ ರಾಜ್ಯಮಟ್ಟದ ಕಬ್ ಮತ್ತು ಬುಲ್ಸ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.
ಪಠ್ಯೇತರ ಚಟುವಟಿಕೆಗಳ ಆಸಕ್ತಿ: ವಿದ್ಯಾರ್ಥಿಗಳಲ್ಲಿ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳ ಬಗ್ಗೆ ಆಸಕ್ತಿ ಮೂಡಬೇಕು. ಮಕ್ಕಳಲ್ಲಿ ನಿಸರ್ಗದ ಒಲವು ಮೂಡಿಸಿ ಸದಾ ಉತ್ಸಾಹ ಮೂಡಿಸುವ ಕಾರ್ಯ ಸ್ಕೌಟ್ ಅಂಡ್ ಗೈಡ್ನಿಂದ ಸಾಧ್ಯ. ವಿದ್ಯಾರ್ಥಿಗಳಿಗೆ ಪಠ್ಯದ ಜತೆಗೆ ಇಂಥ ತರಬೇತಿ ಅವಶ್ಯಕ ಎಂದರು.
ಮನೋವಿಕಾಸಕ್ಕೆ ಪೂರಕ: ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಹಂಪಯ್ಯನಾಯಕ, ದೇಶದ ಬಗ್ಗೆ ಅಭಿಮಾನ, ಶಿಕ್ಷಣ, ಸಂಸ್ಕೃತಿಯ ಬಗ್ಗೆ ತಿಳಿವಳಿಕೆ ನೀಡುವುದು ಅವಶ್ಯಕ. ಈ ನಿಟ್ಟಿನಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ ಪಟ್ಟಣದಲ್ಲಿ ನಡೆಯುತ್ತಿರುವುದು ಶ್ಲಾಘನೀಯ. ಮಕ್ಕಳಲ್ಲಿ ಮನೋವಿಕಾಸಕ್ಕೆ ಸ್ಕೌಟ್ಸ್ ಅಂಡ್ ಗೈಡ್ಸ್ ಪೂರಕ ಎಂದು ತಿಳಿಸಿದರು.
ಕಲ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಶ್ರೀ ಸಾನಿಧ್ಯ ವಹಿಸಿದ್ದರು. ಪುರಸಭೆ ಅಧ್ಯಕ್ಷ ಸೈಯದ್ ನಜೀರುದ್ದೀನ್ ಖಾದ್ರಿ, ಜಿಲ್ಲಾ ಮುಖ್ಯ ಆಯುಕ್ತ ಕೆ. ತಿಮ್ಮಯ್ಯ, ಪುರಸಭೆ ಉಪಾಧ್ಯಕ್ಷ ದೊಡ್ಡಬಸ್ಸಪ್ಪ, ಕಾಕತೀಯ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಪಿ. ಪ್ರಸಾದ, ಗೋಪಾಲಕೃಷ್ಟಮೂರ್ತಿ, ರವಿಬಾಬು, ಶೇಷಗಿರಿರಾವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಪೂರ್ ಸಾಬ್, ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಹಾದೇವಪ್ಪ, ಆರ್. ಮಹಾಂತೇಶ ಸ್ವಾಮಿ, ಸಿಪಿಐ ಜಿ. ಹರೀಶ್, ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಚಾಲಕಿ ಜಾನಕಿ, ಮಂಜುನಾಥ ಸೇರಿ ಅನೇಕರಿದ್ದರು.
ಕಾರ್ಯಕ್ರಮದಲ್ಲಿ ರಾಜ್ಯದ 22 ಜಿಲ್ಲೆಗಳಿಂದ 700 ಕಬ್ ಮತ್ತು ಬುಲ್ ಬುಲ್ ಘಟಕಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಮುಂದಿನ ಮೂರು ದಿನಗಳವರೆಗೆ ನಡೆವ ಈ ಉತ್ಸವದಲ್ಲಿ ಮಕ್ಕಳಿಗೆ ಪಥಸಂಚಲನ, ಮನೋಜ್ಞ ಆಟಗಳು, ಕೌಶಲ್ಯ ಪ್ರದರ್ಶನ, ಕರಕುಶಲಕಲೆ, ಸಾಹಸಮಯ ಚಟುವಟಿಕೆಗಳು, ಮೆದುಳಿಗೆ ಕಸರತ್ತು ನೀಡುವ ನೋಟಗಳು, ಜಂಗಲ್ ಕಥೆ, ತಾರಾ ಕಥೆ, ಜಾನಪದ ಮೇಳ, ಕಲರವ, ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆ, ವಿನೋದ, ನಾಟಕ, ರಸಪ್ರಶ್ನೆ ಸೇರಿ ವಿವಿಧ ಸ್ಪರ್ಧೆ ಆಯೋಜಿಸಲಾಗಿದೆ. ಪಾಲ್ಗೊಂಡಿರುವ ವಿದ್ಯಾರ್ಥಿಗಳು ಹೆಚ್ಚಿನ ಸಂತೋಷ್ಟದಿಂದ ಪಾಲ್ಗೊಂಡಿದ್ದು ಕಂಡು ಬಂದಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

