ರಾಯಚೂರು

ಸಮಾಜ ಕಲ್ಯಾಣಾಧಿಕಾರಿ ವಿರುದ್ಧ ಅಕ್ರಮದ ದೂರು

Published On :

ರಾಯಚೂರು: ತಾಲೂಕಿನ ಸಮಾಜ ಕಲ್ಯಾಣಾಧಿಕಾರಿಗಳು ಕಾನೂನು ಉಲ್ಲಂಘಿಸಿ ವಿವಿಧ ಯೋಜನೆಗಳಡಿ ಅಕ್ರಮ ಎಸಗುತ್ತಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ದಲಿತ ಸಂಘರ್ಷ ಸಮಿತಿ ಆರೋಪಿಸಿದೆ.
ಈ ಕುರಿತು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಸಂಘಟನೆಯ ಜಿಲ್ಲಾ ಸಂಘಟನಾ ಸಂಚಾಲಕ ಶರಣಪ್ಪ ದಿನ್ನಿ,ವಸತಿ ನಿಲಯಗಳಲ್ಲಿ ಅವ್ಯವಸ್ಥೆ ಮನೆ ಮಾಡಿದ್ದು, ನಿಲಯಗಳಿಗೆ ರಾತ್ರಿ ಕಾವಲುಗಾರರಿಲ್ಲ. ವಿದ್ಯಾರ್ಥಿಗಳು ಅವ್ಯವಸ್ಥೆ ಯಲ್ಲಿಯೇ ಜೀವನ ನಡೆಸಿದ್ದಾರೆಂದು ದೂರಿದರು.
ವಸತಿ ನಿಲಯಗಳ ಸಿಬ್ಬಂದಿಗಳ ಸಮರ್ಪಕ ಕಾರ್ಯನಿರ್ವಹಣೆಗೆ ಬಯೋವುಟ್ರಿಕ್ ವ್ಯವಸ್ಥೆ ಅಳವಡಿಸಿದ್ದರೂ, ಅವುಗಳನ್ನು ಬಳಕೆ ಮಾಡುತ್ತಿಲ್ಲ. ಕಡಿಮೆ ಸಂಖ್ಯೆಯ ವಿದ್ಯಾರ್ಥಿಗಳಿದ್ದರೂ ಹೆಚ್ಚಿನ ಪ್ರಮಾಣದಲ್ಲಿದ್ದಾರೆಂದು ದಾಖಲಿಸಿ ಸುಳ್ಳು ಬಿಲ್ ತಯಾರಿಸಿ ಹಣ ಪಡೆಯಲಾಗುತ್ತಿದೆ ಎಂದು ಆರೋಪಿಸಿದರು.
ಎಸ್ಸಿ, ಎಸ್ಟಿಗಳು ವಾಸವಾಗಿರುವ ಪ್ರದೇಶದಲ್ಲಿ ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳು ವಾಸ್ತವ್ಯ ಹೂಡಿ ಅಲ್ಲಿನ ಸಮಸ್ಯೆ ಗಳನ್ನು ಅರಿಯುವ ಪ್ರಯತ್ನ ಮಾಡಿಲ್ಲ.ವಿವಿಧ ಯೋಜನೆ ಅಡಿ ಬಿಡುಗಡೆಯಾಗುವ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿರುವ ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಅದೇ ರೀತಿ ಇಲಾಖೆಯ ವಿವಿಧ ಸಿಬ್ಬಂದಿ ಕಚೇರಿಗೆ ಹಾಜರಾಗದೇ ವೇತನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಹೀಗೆ ಹತ್ತು ಹಲವು ಅಕ್ರಮಗಳಿಗೆ ದಾರಿ ಮಾಡಿರುವ ಮೇಲಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.