ರಾಯಚೂರು

ಹೊಸ ಸಮಿತಿ ರಚನೆಗೆ ಆಗ್ರಹ

Published On :

ಕೆಂಭಾವಿ: ಪಟ್ಟಣದ ಉರ್ದು ಪ್ರಾಥಮಿಕ ಶಾಲೆಯಲ್ಲಿ ರಚನೆಯಾದ ಎಸ್‌ಡಿಎಂಸಿ ಸಮಿತಿಯು ರಾಜಕೀಯ ಪ್ರೇರಿತವಾಗಿದ್ದು, ಇದನ್ನು ರದ್ದುಪಡಿಸಿ ಹೊಸ ಸಮಿತಿಯನ್ನು ರಚನೆ ಮಾಡಬೇಕೆಂದು ಪಾಲಕರಾದ ಮಹ್ಮದಸಾಬ ಸಾಸನೂರ, ತಾಹೆರಪಾಶಾ ಖಾಜಿ, ಮಷಾಕ ಸಾಸನೂರ ಶಿಕ್ಷಣಾಧಿಕಾರಿಗಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಈ ಸಂಬಂಧ ಹೇಳಿಕೆ ನೀಡಿ, ಶಾಲೆಯಲ್ಲಿ ಓದುತ್ತಿರುವ ಮಕ್ಕಳ ಪಾಲಕರ ಗಮನಕ್ಕೆ ತರದೆ ಬೇರೆ ವ್ಯಕ್ತಿಗಳನ್ನು ಸಮಿತಿಯ ಸದಸ್ಯರನ್ನಾಗಿ ಮಾಡಿದ್ದು, ಇದು ದೋಷಪೂರಿತವಾಗಿದೆ. ಮೊದಲು ಇದ್ದ ಅಧ್ಯಕ್ಷರ ಗಮನಕ್ಕೆ ತರದೇ ಈ ಸಮಿತಿ ರಚನೆಯಾಗಿದ್ದು, ಇಲ್ಲಿ ಕಾಣದ ಕೈಗಳು ಕೆಲಸ ಮಾಡಿವೆ. ಆದ್ದರಿಂದ ಈ ಶಾಲಾಭಿವೃದ್ಧಿ ಸಮಿತಿಯನ್ನು ರದ್ದು ಮಾಡಲು ಕ್ಷೇತ್ರ ಶಿಕ್ಷಣಾಧಿಕಾರಿಗೆ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.