ರಾಯಚೂರು

ಆಸ್ಪತ್ರೆಯಲ್ಲಿ ಮುಂದುವರೆದ ಅವ್ಯವಸ್ಥೆ

Published On :

ಶಹಾಪುರ: ಸ್ಥಳೀಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಈ ಹಿಂದೆ ಭೇಟಿ ನೀಡಿದ ಸ್ಥಳೀಯ ಶಾಸಕ ಗುರುಪಾಟೀಲ ಶಿರವಾಳ ಅಲ್ಲಿನ ಅವ್ಯವಸ್ಥೆ ಕಂಡು, ಮುಂದಿನ ದಿನಗಳಲ್ಲಿ ಸುಧಾರಿಸಿಕೊಳ್ಳಲು ಸೂಚನೆ ನೀಡಿದ್ದರು. ಆದರೆ ಅಲ್ಲಿನ ಅವ್ಯವಸ್ಥೆ ಹಾಗೇ ಮುಂದುವರೆದಿದ್ದನ್ನು ಕಂಡು ಡಿ. 21ರಂದು ಭೇಟಿ ನೀಡಿದ ಸಂದರ್ಭದಲ್ಲಿ ಅಸಮಧಾನ ವ್ಯಕ್ತಪಡಿಸಿದರು.
ಪ್ರಸ್ತುತ ಆಸ್ಪತ್ರೆಯಲ್ಲಿ ಎಸ.ಡಿಸಿಯಾಗಿ ಕಾರ್ಯ ನಿರ್ವಹಿಸುತ್ತಿರುವ ದತ್ತಾತ್ರೇಯ ಅವರ ಮೇಲೆ ತಕ್ಷಣವೇ ಕ್ರಮ ಜರುಗಿಸುವಂತೆ ಸಂಬಂಧಿಸಿದ ಡಿಎಚ್‌ಓ ಮತ್ತು ಸಿಇಓಗೆ ಪತ್ರ ಬರೆದಿದ್ದಾರೆ. ದತ್ತಾತ್ರೇಯ ಸುಮಾರು ವರ್ಷಗಳಿಂದ ಬಡ್ತಿ ಪಡೆದು ಎಸ್‌ಡಿಸಿಯಾಗಿ ಸ್ಥಳೀಯ ಆಸ್ಪತ್ರೆಯಲ್ಲಿಯೇ ಬೇರೂರಿದ್ದಾರೆ. ಹಲವಾರು ಯೋಜನೆಗಳ ಕಡತಗಳನ್ನು ನೆನೆಗುದಿಗೆ ಹಾಕಿದ್ದಲ್ಲದೆ ಆಸ್ಪತ್ರೆಯ ವೈದ್ಯಾಧಿಕಾರಿಗಳ ಜೊತೆ ದಾದಿಯರ ಜೊತೆ ಮತ್ತು ಆಸ್ಪತ್ರೆಗೆ ಬಂದ ರೋಗಿಗಳ ಜೊತೆಗೂ ಸಹಕಾರ ನೀಡದೆ ಮನಬಂದಂತೆ ಉದ್ಧಟತನ ಪ್ರದರ್ಶಿಸಿದ್ದಾರೆ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.