ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ಸಿಂಧನೂರು: ತಾಲೂಕಿನ ಗುಡದೂರು ಜಿ.ಪಂ. ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಿ.ಪಂ. ಸದಸ್ಯ ಶಿವನಗೌಡ ಎಲೆಕೂಡ್ಲಿಗಿ ಭೂಮಿ ಪೂಜೆ ನೆರವೇರಿಸಿದರು.
ಜಿ.ಪಂ.ನ 2013-14ನೇ ಸಾಲಿನಲ್ಲಿ ರು. 3 ಲಕ್ಷ ವೆಚ್ಚದಲ್ಲಿ ರಾಮರೆಡ್ಡಿಕ್ಯಾಂಪಿನಿಂದ ತೆಗ್ಗಿನಗಿಡ ಕ್ಯಾಂಪ್ಗೆ ಹೋಗುವ ರಸ್ತೆ ಅಭಿವೃದ್ಧಿ, ತೆಗ್ಗಿನಗಿಡಕ್ಯಾಂಪ್ನಲ್ಲಿ ಎನ್ಡಿಡಬ್ಲ್ಯೂಪಿ ಯೋಜನೆಯಡಿ ಕುಡಿಯುವ ನೀರಿನ ಯೋಜನೆಗೆ ರು. 2.50 ಲಕ್ಷ ಹಾಗೂ ಕಲ್ಲೂರು ಗ್ರಾಮದಲ್ಲಿ ಬಿಆರ್ಜಿಎಫ್ ಯೋಜನೆಯಡಿ ರು. 2.64 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಯಿತು. ಜಿ.ಪಂ ಮಾಜಿ ಅಧ್ಯಕ್ಷ ಪಂಪನಗೌಡ ಬಾದರ್ಲಿ, ಕಾಂಗ್ರೆಸ್ ಮುಖಂಡರಾದ ಮಲ್ಲನಗೌಡ ಕನ್ನಾರಿ, ವೆಂಕೋಬಣ್ಣ ಕಲ್ಲೂರು, ದೇವೇಂದ್ರಪ್ಪ, ಮುದುಕಪ್ಪ ಸಾಹುಕಾರ, ವೀರಭದ್ರಯ್ಯ ಸ್ವಾಮಿ, ಗ್ರಾ.ಪಂ. ಸದಸ್ಯ ಬಸವರಾಜ, ಯಮನಪ್ಪ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

