ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ನಿಧನಕ್ಕೆ ಸಂತಾಪ
ಸಿಂಧನೂರು: ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪನವರ ನಿಧನದಿಂದ ಕನ್ನಡ ನಾಡಿನ ಸಾಹಿತ್ಯ ಲೋಕಕ್ಕೆ ಅಪಾರ ನಷ್ಟವಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ರಮಾದೇವಿ ಶಂಭೋಜಿ ಕಂಬನಿ ಮಿಡಿದಿದ್ದಾರೆ. ಕನ್ನಡ ನಾಡು ನುಡಿಗೆ ತುಂಬಲಾರದಷ್ಟು ಹಾನಿಯಾಗಿದೆಯೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ದೇವೇಂದ್ರಗೌಡ ತಿಳಿಸಿದ್ದಾರೆ. ಶಿವರುದ್ರಪ್ಪನವರ ನಿಧನಕ್ಕೆ ಜಿಲ್ಲಾ ಕಸಾಪ ಗೌರವಾಧ್ಯಕ್ಷ ಎಸ್.ಶರಣೇಗೌಡ, ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬೀರಪ್ಪ ಶಂಭೋಜಿ, ಕಸಾಪ ಮಾಜಿ ಅಧ್ಯಕ್ಷ ವೆಂಕನಗೌಡ ವಟಗಲ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ತಾಲೂಕಾಧ್ಯಕ್ಷ ಚಂದ್ರಶೇಖರ ಹಿರೇಮಠ, ತಾಲೂಕು ಕಸಾಪ ಗೌರವ ಸಲಹೆಗಾರ ಮಹಾಂತ ಸ್ವಾಮೀಜಿ ಸಾಲಿಮಠ, ಡಾ. ಮಧುಮತಿ ದೇಶಪಾಂಡೆ, ವೈ.ನರೇಂದ್ರನಾಥ, ವೆಂಕನಗೌಡ ಗದ್ರಟಗಿ, ನರಸಿಂಹಪ್ಪ ಜನತಾ ಕಾಲೋನಿ ಮತ್ತಿತರರು ಸಂತಾಪ ವ್ಯಕ್ತಪಡಿಸಿದ್ದಾರೆ.
ಲಿಂಗಸ್ಗೂರು; ಕಸಾಪ ಶ್ರದ್ಧಾಂಜಲಿ
ಲಿಂಗಸ್ಗೂರು: ರಾಷ್ಟ್ರಕವಿ ಡಾ. ಜಿ.ಎಸ್. ಶಿವರುದ್ರಪ್ಪ ಅವರು ಸೋಮವಾರ ನಿಧನರಾದ ಪ್ರಯುಕ್ತ ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು ಕಸಾಪ ಭವನದಲ್ಲಿ ಮಂಗಳವಾರ ಸಭೆ ಸೇರಿ ಶ್ರದ್ಧಾಂಜಲಿ ಅರ್ಪಿಸಿದರು. ಈ ಸಂದರ್ಭದಲ್ಲಿ ಕಸಾಪ ತಾಲೂಕಾಧ್ಯಕ್ಷ ಸಿ.ಶರಣಪ್ಪ, ಸಾಹಿತಿ ಗಿರಿರಾಜ ಹೊಸಮನಿ, ಉಪನ್ಯಾಸಕರಾದ ಜಿ.ವಿ. ಕೆಂಜನಗುಡ್ಡ, ಶರಣಯ್ಯ ಸೊಪ್ಪಿಮಠ, ಮಂಜುನಾಥ ಕಾಮಿನ್, ಡಾ. ಕೆ.ಶಶಿಕಾಂತ, ಶ್ರೀನಿವಾಸ, ಅಯ್ಯಪ್ಪ ಕವಿತಾಳ, ಭೀಮಪ್ಪ ನಾಯಕ ಇನ್ನಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

