ರಾಯಚೂರು

ಸಮಾಜ ಕಲ್ಯಾಣಾಧಿಕಾರಿ ಅಮಾನತಿಗೆ ಒತ್ತಾಯ

Published On :

ಸಿಂಧನೂರು: ಪರಿಶಿಷ್ಟ ಜಾತಿ ಮತ್ತು ಪಂಗಡದ ಎಲ್ಲ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ನೀಡಬೇಕೆಂಬ ಸರ್ಕಾರದ ಆದೇಶವನ್ನು ನಿರ್ಲಕ್ಷಿಸಿರುವ ಸಮಾಜ ಕಲ್ಯಾಣಾಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಪ್ರಜಾಜಾಗೃತಿ ಯುವಕ ಸಂಘದ ಅಧ್ಯಕ್ಷ ಎಚ್.ಜಗದೀಶ ವಕೀಲರು ಮತ್ತು ದಲಿತ ವಿಮೋಚನೆ ಸೇನೆಯ ಅಧ್ಯಕ್ಷ ವಿರುಪಣ್ಣ ನಂದವಾಡಗಿ ಆಗ್ರಹಿಸಿದ್ದಾರೆ.
ಈ ಕುರಿತು ಸಮಾಜ ಕಲ್ಯಾಣ ಸಚಿವರಿಗೆ ಪತ್ರ ಬರೆದಿರುವ ಅವರು, 2013- 14ನೇ ಸಾಲಿಗೆ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಸತಿ ನಿಲಯಗಳಿಗೆ ಪ್ರವೇಶ ಕೋರಿ ಎಲ್ಲ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ಸೌಲಭ್ಯ ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದರೂ ಅಧಿಕಾರಿಗಳು ಗಣನೆಗೆ ತೆಗೆದುಕೊಳ್ಳದೆ ನೂರಾರು ವಿದ್ಯಾರ್ಥಿಗಳ ಆಸೆಗೆ ತಣ್ಣೀರು ಎರಚಿದ್ದಾರೆಂದು ತಿಳಿಸಿದ್ದಾರೆ.
ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ಬಾಲಕಿಯರ ವಸತಿ ನಿಲಯಕ್ಕೆ ಒಟ್ಟು 65 ಜನ ಅರ್ಜಿ ಸಲ್ಲಿಸಿದ್ದು, ಅದರಲ್ಲಿ ಕೇವಲ 25 ಜನ ವಿದ್ಯಾರ್ಥಿನಿಯರನ್ನು ಆಯ್ಕೆ ಮಾಡಲಾಗಿದೆ. ಆದಾಗ್ಯೂ 27 ವಿದ್ಯಾರ್ಥಿನಿಯರು ವಸತಿ ನಿಲಯದಿಂದ ವಂಚಿತರಾಗಿದ್ದಾರೆ. ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ಬಾಲಕರ ವಸತಿ ನಿಲಯಕ್ಕೆ ಪ್ರವೇಶ ಕೋರಿ 171 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದು, ಕೇವಲ 21 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ.
90 ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯವಿಲ್ಲ: ಕೆಲ ಪಾಲಕರು ಸರ್ಕಾರದ ಆದೇಶ ಕುರಿತು ಧ್ವನಿ ಎತ್ತಿದಾಗ ಮತ್ತೆ ಕೆಲ ವಿದ್ಯಾರ್ಥಿಗಳನ್ನು ದಾಖಲಿಸಿಕೊಂಡಿದ್ದಾರೆ. ಇನ್ನೂ 90 ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಸಿಕ್ಕಿಲ್ಲ. ತಮ್ಮ ಸ್ವಂತ ಹಣದಲ್ಲಿ ಬಾಡಿಗೆ ಮನೆ ಹಿಡಿದು ಊಟಕ್ಕಾಗಿ ಮಾತ್ರ 3 ಕಿಮೀ ತಿರುಗುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರ ಸೂಕ್ತ ನ್ಯಾಯ ನೀಡಬೇಕು. ಅಲ್ಲದೆ ಹಾಸ್ಟೆಲ್‌ನಿಂದ ವಂಚಿತರಾದ ಎಲ್ಲ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶ ನೀಡಬೇಕೆಂದು ಜಗದೀಶ ವಕೀಲರು ಮತ್ತು ವಿರುಪಣ್ಣ ನಂದವಾಡಗಿ ಸಮಾಜ ಕಲ್ಯಾಣ ಸಚಿವರನ್ನು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.