ಆರ್ಟಿಪಿಎಸ್ನ 6ನೇ ಘಟಕ ಸ್ಥಗಿತ
ರಾಯಚೂರು: ಶಕ್ತಿನಗರದ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಆರನೇ ಘಟಕದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದರಿಂದ ವಿದ್ಯುತ್ ಉತ್ಪಾದನೆ ಬುಧವಾರ ರಾತ್ರಿ ಸ್ಥಗಿತಗೊಳಿಸಿದೆ. ಸದ್ಯ ವಿದ್ಯುತ್ ಕೇಂದ್ರದ 3ನೇ ಘಟಕವನ್ನು ವಾರ್ಷಿಕ ದುರಸ್ತಿಗೆ ತೆಗೆದುಕೊಳ್ಳಲಾಗಿದ್ದು, ಗುರುವಾರ ಬೆಳಗ್ಗೆ ವರೆಗೆ ಒಟ್ಟು ಆರು ಘಟಕಗಳಿಂದ 1024 ಮೆವ್ಯಾ ವಿದ್ಯುತ್ ರಾಜ್ಯ ಜಾಲಕ್ಕೆ ರವಾನಿಸಲಾಗಿದೆ ಎಂದು ಆರ್ಟಿಪಿಎಸ್ ಮೂಲಗಳು ತಿಳಿಸಿವೆ.
ಬಾಂಬ್ ಸ್ಫೋಟ: ಐವರ ಸಾವು
ಜಲಪಾಯ್ಗುರಿ: ಸಂಚರಿಸುತ್ತಿದ್ದ ಸೈಕಲ್ನಲ್ಲಿದ್ದ ಬಾಂಬ್ ಸ್ಫೋಟಗೊಂಡು 5 ಮಂದಿ ಸಾವಿಗೀಡಾದ ಘಟನೆ ಪಶ್ಚಿಮ ಬಂಗಾಳದ ಜಲಪಾಯ್ಗುರಿ ಸಮೀಪದ ಬಜ್ರಾಪುರದಲ್ಲಿ ಗುರುವಾರ ರಾತ್ರಿ ನಡೆದಿದೆ. ಘಟನೆಯಿಂದ 6 ಮಂದಿ ಗಾಯಗೊಂಡಿದ್ದಾರೆ. ರಾತ್ರಿ 7 ಗಂಟೆ ಸಮಯದಲ್ಲಿ ಸಂಚರಿಸುತ್ತಿದ್ದ ಸೈಕಲ್ನಲ್ಲಿ ಬಾಂಬ್ ಸ್ಫೋಟಗೊಂಡಿದೆ. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದು, ಇದು ಭಯೋತ್ಪಾಕರ ಕೃತ್ಯವೋ ಅಥವಾ ಸೈಕಲ್ನಲ್ಲಿ ಸ್ಫೋಟಕ ಸಾಗಿಸುತ್ತಿದ್ದಾಗ ಆಕಸ್ಮಿಕವಾಗಿ ಈ ಘಟನೆ ನಡೆದಿದೆಯೋ ಎಂಬ ಬಗ್ಗೆ ಇನ್ನಷ್ಟೇ ಗೊತ್ತಾಗಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಂಕಿತ ಡೆಂಘೀಗೆ ಮಹಿಳೆ ಬಲಿ
ಕೊಪ್ಪಳ: ಕೊಪ್ಪಳದ ದಾಸರ ಓಣಿಯ ಮಹಿಳೆಯೊಬ್ಬರು ಶಂಕಿತ ಡೆಂಘೀಗೆ ಮೃತಪಟ್ಟಿದ್ದಾರೆ. ಸುಧಾರಾಣಿ ಚಂದ್ರು ಚನ್ನದಾಸರ್(26) ಮೃತಯುವತಿ. ಸುಧಾರಾಣಿ ಎರಡು ದಿನದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದಳು. ವೈದ್ಯರು ಟೈಫಾಯ್ಡ್ ಬಂದಿದ್ದು, ಗುಣಮುಖವಾಗಲಿದ್ದಾಳೆ ಎಂದಿದ್ದರು. ಆದರೆ ಬುಧವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಈಕೆ ಡೆಂಘೀಯಿಂದ ಮೃತಪಟ್ಟ ಬಗ್ಗೆ ಆಸ್ಪತ್ರೆ ವರದಿ ನೀಡಿದೆ. ಮೃತ ಮಹಿಳೆಗೆ 3 ವರ್ಷದ ಒಂದು ಹೆಣ್ಣು ಮಗುವಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

