ವಿವಿಧ ಯೋಜನೆಗಳಿಗೆ ಬಾದರ್ಲಿ ಚಾಲನೆ
ಸಿಂಧನೂರು: ತಾಲೂಕಿನ ಸಾಲಗುಂದಾ ಜಿಪಂ ಕ್ಷೇತ್ರದ ವ್ಯಾಪ್ತಿಯಲ್ಲಿ 1.8 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಾಸಕ ಹಂಪನಗೌಡ ಬಾದರ್ಲಿ ಭೂಮಿ ಪೂಜೆ ನೆರವೇರಿಸಿದರು.
ಅವರು ಮಲ್ಕಾಪುರ ಕ್ಯಾಂಪಿನಲ್ಲಿ ಶುಕ್ರವಾರ 20 ಲಕ್ಷ ವೆಚ್ಚದಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯದ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ, ಸೋಮಲಾಪುರ ಗ್ರಾಮದಲ್ಲಿ 30 ಲಕ್ಷ ವೆಚ್ಚದಲ್ಲಿ ವೆಂಕಟೇಶ್ವರ ಕ್ಯಾಂಪ್ ಸೋಮಲಾಪುರ ರಸ್ತೆ ಡಾಂಬರೀಕರಣ, ಸುವರ್ಣ ಗ್ರಾಮ ಯೋಜನೆಯಡಿ 1.25 ಕೋಟಿಯಲ್ಲಿ ಸಿಸಿ ರಸ್ತೆ, ಸಮುದಾಯ ಭವನ, ಅಂಗನವಾಡಿ ಕೇಂದ್ರಗಳ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಜಿಪಂಸದಸ್ಯ ಚಂದೂಸಾಬ್ ಮುಳ್ಳೂರು, ತಾಪಂ ಅಧ್ಯಕ್ಷೆ ಬಸಮ್ಮ ಕೊಟ್ರಪ್ಪ, ಉಪಾಧ್ಯಕ್ಷ ನಾಗಪ್ಪ ಗೋಮರ್ಸಿ, ಸದಸ್ಯೆ ಜಿ.ಆದಿಲಕ್ಷ್ಮೀ, ಗ್ರಾಪಂ ಅಧ್ಯಕ್ಷ ವೀರರಾಜು, ಮುಖಂಡರಾದ ಬಸವರಾಜ ಹಿರೇಗೌಡರ್, ವೀರರಾಜು, ಪಿಡಬ್ಲ್ಯೂಡಿ ಇಲಾಖೆಯ ಎಇಇ ನಾಗರಾಜ, ಭೂಸೇನಾ ನಿಗಮದ ಜೆಇ ಸೋಮಶೇಖರ ಹಾಗೂ ಇತರರು ಉಪಸ್ಥಿತರಿದ್ದರು.
ಸೈಕಲ್ ವಿತರಣೆ: ಸೋಮಲಾಪುರ ಹಾಗೂ ಅಂಬಾಮಠದ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ ಶಾಸಕ ಹಂಪನಗೌಡ ಬಾದರ್ಲಿ, ಜಿಪಂ ಸದಸ್ಯ ಚಂದೂಸಾಬ್ ಮುಳ್ಳೂರು ಹಾಗೂ ಇತರರು ಸೈಕಲ್ಗಳನ್ನು ವಿತರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

