ಶೈಕ್ಷಣಿಕ ವ್ಯವಸ್ಥೆ ಬದಲಾದ್ರೆ ಸುಧಾರಣೆ
ಸಿಂಧನೂರು: ವೈಜ್ಞಾನಿಕವಾದ ಅಧ್ಯಯನಗಳ ಆಧಾರದ ಮೇಲೆ ಜೈವಿಕವಾಗಿ ಹೆಣ್ಣು- ಗಂಡು ಸಮಾನ ಶಕ್ತಿ ಸಾಮರ್ಥವುಳ್ಳವರಾಗಿದ್ದಾರೆ. ದೇಶದ ಜನಸಂಖ್ಯೆಯಲ್ಲಿ ಅರ್ಧದಷ್ಟು ಇರುವ ಮಹಿಳಾ ಮಾನವ ಸಂಪನ್ಮೂಲವನ್ನು ಉಪಯುಕ್ತವಾಗಿಸಲು ಪ್ರಯತ್ನಿಸಬೇಕಾಗಿದೆ ಎಂದು ನಗರಸಭೆಯ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಸರಸ್ವತಿ ಪಾಟೀಲ್ ಹೇಳಿದರು.
ಏಷಿಯನ್ ಅಭಿವೃದ್ಧಿ ಬ್ಯಾಂಕ್ ನೆರವಿನ ಉತ್ತರ ಕರ್ನಾಟಕ ನಗರ ವಲಯ ಬಂಡವಾಳ ಹೂಡಿಕಾ ಕಾರ್ಯಕ್ರಮದ ವಿಶ್ವ ಸೇವಾ ಮಿಷನ್ ಮತ್ತು ನಗರಸಭೆಯ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಪಪೂ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಲಿಂಗತ್ವ ಸಂವೇದನಾಶೀಲ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ಇತ್ತೀಚಿನ ವರ್ಷಗಳಲ್ಲಿ ಸ್ತ್ರೀಯರ, ಶೈಕ್ಷಣಿಕ, ವೈಜ್ಞಾನಿಕ, ರಾಜಕೀಯ ಮುಂತಾದ ಕ್ಷೇತ್ರಗಳಲ್ಲಿ ಸ್ತ್ರೀಯರು ಅನೇಕ ಶೋಷಣೆಗಳಿಗೆ, ದೌರ್ಜನ್ಯಕ್ಕೆ ಒಳಗಾಗಿದ್ದಾರೆ. ಸಮಾಜ ಬದಲಾಗಬೇಕಾದರೆ ಶೈಕ್ಷಣಿಕ ವ್ಯವಸ್ಥೆ ಬದಲಾಗಬೇಕು ಎಂದು ಹೇಳಿದರು.
ಶ್ಲಾಘನೆ: ಕಾರ್ಯಕ್ರಮ ಉದ್ಘಾಟಿಸಿದ ಕಾಲೇಜಿನ ಪ್ರಾಚಾರ್ಯ ಉರುಕುಂದಪ್ಪ ತಂಬೂರಿ, ಮುಂದಿನ ಪೀಳಿಗೆಯ ಯುವಕ-ಯುವತಿಯರಿಗೆ ಹಾಗೂ ಅವರ ಪೋಷಕರಿಗೆ ವಿಶ್ವ ಸೇವಾ ಮಿಷನ್ ಸಂಸ್ಥೆ ವತಿಯಿಂದ ಲಿಂಗತ್ವ ಸಂವೇದನಾಶೀಲಾ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಸಂತಸದ ಸಂಗತಿ ಎಂದರು.
ಉಪನ್ಯಾಸಕ ಶಂಕರ್ ಗುರಿಕಾರ್, ಯೋಜನಾಧಿಕಾರಿ ಸಿ.ನಾಗರಾಜ ಮಾತನಾಡಿದರು. ಸಮುದಾಯ ಅಭಿವೃದ್ಧಿ ಸಂಘ ಅಧ್ಯಕ್ಷೆ ಪಿ.ಶ್ರೀದೇವಿ ಶ್ರೀನಿವಾಸ, ಉಪಾಧ್ಯಕ್ಷೆ ಅನುಸೂಯಮ್ಮ ನಗರಸಭೆ ಮಾಜಿ ಸದಸ್ಯೆ ಶೈಲಜಾ ಷಡಕ್ಷರಪ್ಪ, ಯೋಜನೆಯ ಸಿಬ್ಬಂದಿ ಹನುಮಂತಪ್ಪ, ಸೈಯದ್ಜಾವೀದ್ ಪಾಷ, ಹನುಮಂತಪ್ಪ, ಬಸಮ್ಮ ಅಶೋಕ ಬಾಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರಸಭೆ ಸದಸ್ಯೆ ಸುಮಂಗಲಾ ಮಲ್ಲಿಕಾರ್ಜುನಗೌಡ ವಹಿಸಿದ್ದರು. ಕು. ಭಾಗ್ಯಲಕ್ಷ್ಮೀ ಪ್ರಾರ್ಥಿಸಿದರು. ಹುಲಗೇಶ ಬಾದರ್ಲಿ ಸ್ವಾಗತಿಸಿದರು. ಶಾಂತಮುತ್ತಯ್ಯ ಗುರುವಿನ್ ನಿರೂಪಿಸಿದರು. ಬಸವರಾಜ ಭಂಗಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

