ರಾಯಚೂರು

ಪ್ರಾಥಮಿಕ ಆರೋಗ್ಯ ಕೇಂದ್ರ ಮಂಜೂರಿಗೆ ಗ್ರಾಮಸ್ಥರ ಆಗ್ರಹ

Published On :

ಕ.ಪ್ರ. ವಾರ್ತೆ, ಲಿಂಗಸ್ಗೂರು, ಡಿ.30
ತಾಲೂಕಿನ ಕಾಳಾಪುರ ಗ್ರಾಪಂ ವ್ಯಾಪ್ತಿಯ ಫೂಲಬಾವಿ ಗ್ರಾಮಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರ ಮಂಜೂರು ಮಾಡುವಂತೆ ಗ್ರಾಮಸ್ಥರು ಸೋಮವಾರ ಸಹಾಯಕ ಆಯುಕ್ತರ ಮೂಲಕ ಆರೋಗ್ಯ ಸಚಿವರಿಗೆ ಆಗ್ರಹಿಸಿದ್ದಾರೆ.
ಗ್ರಾಮವು ಸುಮಾರು 4 ಸಾವಿರ ಜನಸಂಖ್ಯೆ ಹೊಂದಿದ್ದು, ಗ್ರಾಮದಲ್ಲಿ ಸುಮಾರು 30- 40 ಜನರು ಡೆಂಘೀ ಜ್ವರದಿಂದ ಬಳಲುತ್ತಿದ್ದಾರೆ. ಸಾರಿಗೆ ಬಸ್ ವ್ಯವಸ್ಥೆ ಇರುವುದಿಲ್ಲ. ಸೂಕ್ತ ಚಿಕಿತ್ಸೆ ಪಡೆಯಲು ತುರ್ತು ಚಿಕಿತ್ಸೆ ಇಲ್ಲದೆ ಪರದಾಡುವಂತಾಗಿದೆ. ಗ್ರಾಮದ ಯುವಕ ಶಂಕಿತ ಡೆಂಘೀ ಜ್ವರದಿಂದ ಮೃತಪಟ್ಟಿರುತ್ತಾನೆ. ಗ್ರಾಪಂ ವ್ಯಾಪ್ತಿಯಲ್ಲಿ ಫೂಲಬಾವಿ ಗ್ರಾಮ ಅಧಿಕ ಜನಸಂಖ್ಯೆ ಹೊಂದಿದ್ದು, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ತೆರೆಯುವುದು ಅವಶ್ಯಕ. ವಾರದಲ್ಲಿ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಮನವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಮದ ತಾಪಂ ಮಾಜಿ ಸದಸ್ಯ ದೇವಣ್ಣ ನಾಯಕ, ಗ್ರಾಪಂ ಸದಸ್ಯರಾದ ಮಾನಪ್ಪ ಕಟ್ಟಿಮನಿ, ಭೀಮಣ್ಣ ಅಂಬಿಗೇರ, ಆದಮ್ಮ ಸಂಗಪ್ಪ, ಅಮರೇಗೌಡ, ಮುಖಂಡರಾದ ಬಸವರಾಜ ಗಡ್ಡದಹೊಲ, ನಾಗಪ್ಪ ಅಂಬಿಗೇರ, ವೆಂಕಟೇಶ ಭೂಪೂರ, ರಾಮಣ್ಣ ಬೇವೂರ, ನಾಗಪ್ಪ ಗುರಿಕಾರ, ಮುದಿಯಪ್ಪ ಯರಡೋಣ, ಕುಪ್ಪಣ್ಣ ಗುರಿಕಾರ, ಅಯ್ಯಪ್ಪ ಅಂಗಡಿ, ಹನುಮಂತ ಗೌಡ್ರ, ಬಸನಗೌಡ ಸೇರಿದಂತೆ ಇದ್ದರು.
--
ದುರಂತ; ಇಂದು ಶ್ರದ್ಧಾಂಜಲಿ ಸಭೆ

ರಾಯಚೂರು: ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಶಾಖೆಯ ಅಧ್ಯಕ್ಷ ಹಾಗೂ ರಾಜ್ಯ ಸಂಸ್ಥೆಯ ಖಜಾಂಚಿಯಾಗಿದ್ದ ಸುಭಾಷರೆಡ್ಡಿ ಪಾಟೀಲ್ ಅವರು ಈಚೆಗೆ ರೈಲು ದುರಂತದಲ್ಲಿ ನಿಧನರಾದ ಹಿನ್ನೆಲೆ ಡಿ. 31ರಂದು ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಲಾಗಿದೆ. ರೆಡ್‌ಕ್ರಾಸ್ ಸಂಸ್ಥೆಯಿಂದ ಡಿ.31ರಂದು ಬೆಳಗ್ಗೆ 11ಕ್ಕೆ ಸಂಸ್ಥೆಯ ಜಿಲ್ಲಾ ಕಾರ್ಯಾಲಯದಲ್ಲಿ ಆಯೋಜಿಸಿರುವ ಸಭೆಯಲ್ಲಿ ಸಂಸ್ಥೆಯ ಸದಸ್ಯರು ಭಾಗವಹಿಸುವಂತೆ ಸಂಸ್ಥೆಯ ಕಾರ್ಯದರ್ಶಿ ವಿದ್ಯಾಸಾಗರ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.