ರಾಯಚೂರು: ಸಿಂಧನೂರು ತಾಲೂಕಿನ ಭೀಮರಾಜ ಕ್ಯಾಂಪಿನ ಬಳಿ ತುಂಗಭದ್ರಾ ಎಡದಂಡೆ ಕಾಲುವೆಯ ಉಪಕಾಲುವೆ 32ರಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಕಾಲುವೆ ಮೇಲೆ ನೀರು ನಿರ್ವಹಣೆ ಕಾರ್ಯದಲ್ಲಿದ್ದ ನೀರಾವರಿ ಇಲಾಖೆಯ ಅಧಿಕಾರಿಗಳು ಸಂಚಾರದಲ್ಲಿದ್ದಾಗ ಕಾಲುವೆಯಲ್ಲಿ ಗಂಡಸಿನ ಅಪರಿಚಿತ ಶವ ಹರಿದು ಬಂದಿದ್ದು ಈ ಬಗ್ಗೆ ಪೊಲೀಸರಿಗೆ ಸಿಬ್ಬಂದಿ ದೂರಿತ್ತಿದ್ದಾರೆ. ಈ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಮಟಕಾ: ಒಬ್ಬನ ಬಂಧನ
ರಾಯಚೂರು: ಸಿಂಧನೂರು ತಾಲೂಕಿನ ಹಂಪನಾಳ ಗ್ರಾಮದಲ್ಲಿ ಮಟಕಾ ಚೀಟಿ ಬರೆಯುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಬಂಧಿತನನ್ನು ಯಂಕಪ್ಪ ಕುರ್ಲಿ ಎಂದು ಗುರುತಿಸಲಾಗಿದೆ. ಈತ ಗ್ರಾಮದಲ್ಲಿ ಮಟಕಾ ಚೀಟಿ ಬರೆಯುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿ ಅವನಿಂದ ಹಣ 730 ರು. ಜಪ್ತಿ ಮಾಡಿದ್ದಾರೆ. ಈ ಕುರಿತು ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಸೇಂದಿ ಮಾರಾಟ: ಬಂಧನ
ರಾಯಚೂರು: ನಗರದ ನವಾಬಗಡ್ಡ ಪ್ರದೇಶದಲ್ಲಿ ಅಕ್ರಮವಾಗಿ ಸೇಂದಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ತಾಯಪ್ಪ ಎಂದು ಗುರುತಿಸಲಾಗಿದೆ. ಈತ ನವಾಬಗಡ್ಡ ಪ್ರದೇಶದ ತನ್ನ ಮನೆಯ ಮುಂದೆ ಅಕ್ರಮವಾಗಿ ಸೇಂದಿ ಮಾರಾಟದಲ್ಲಿ ತೊಡಗಿದ್ದಾಗ ದಾಳಿ ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿ ಅವನಿಂದ 8ಲೀ ಸೇಂದಿ , ನಗದು ರು. 55 ಜಪ್ತಿ ಮಾಡಿದ್ದಾರೆ. ಈ ಕುರಿತು ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.