ಇಂಗ್ಲಿಷ್ ಕಲಿತು ಭವಿಷ್ಯ ರೂಪಿಸಿಕೊಳ್ಳಿ: ಖಂಡ್ರೆ
ಯಾದಗಿರಿ: ಇಂದಿನ ದಿನಗಳಲ್ಲಿ ಇಂಗ್ಲಿಷ್ ಭಾಷೆ ಮಹತ್ವ ಹೆಚ್ಚು. ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ನೀಡಬೇಕಾದರೆ ಇಂಗ್ಲಿಷ್ ಅಗತ್ಯವೆಂದು ಜಿಪಂ ಸದಸ್ಯ ಬಸವರಾಜ ಖಂಡ್ರೆ ಅಭಿಪ್ರಾಯಪಟ್ಟರು.
ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ರತನ್ ಟಾಟಾ ಟ್ರಸ್ಟ್ ವತಿಯಿಂದ ತಾಲೂಕಿನ ಅಬ್ಬೆತುಮಕೂರು ಸರ್ಕಾರಿ ಹಿರಿಯಾ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಇಂಗ್ಲಿಷ್ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ಇಂಗ್ಲಿಷ್ ಕೇವಲ ನಗರ ಪ್ರದೇಶದ ಮಕ್ಕಳಿಗೆ ಮಾತ್ರ ಸೀಮಿತವಾಗಬಾರದು. ಉನ್ನತ ವಿದ್ಯಾಭ್ಯಾಸಕ್ಕೆ ಇಂದು ಆ ಬಾಷೆಯ ಮಹತ್ವ ಹೆಚ್ಚಾಗಿದ್ದು, ಗ್ರಾಮೀಣ ಭಾಗದ ಮಕ್ಕಳಿಗೂ ಇಂಗ್ಲಿಷ್ ಭಾಷೆ ಕಲಿಸಬೇಕು ಎಂದರು.
ಕೆ.ಎಂ. ವಿಶ್ವನಾಥ, ಆಯ್ದ ಶಾಲೆಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಮಕ್ಕಳಿಗೆ, ಶಿಕ್ಷಕರಿಗೆ ಇಂಗ್ಲಿಷ್ ಭಾಷೆಯನ್ನು ಸರಾಗವಾಗಿ ಓದಲು, ಬರೆಯಲು ಮತ್ತು ಮಾತಾನಾಡಲು ಕಲಿಸುವ ಯೋಜನೆ ಇದಾಗಿದೆ. ಶಿಕ್ಷಕರಿಗೆ ತಿಂಗಳಲ್ಲಿ 2ದಿನ ತರಬೇತಿ ಆಯೋಜಿಸಲಾಗಿದೆ. ಅಧ್ಯಕ್ಷತೆ ಸುಜಾತಾ ವಹಿಸಿದ್ದರು. ರೇಣುಕಾ, ಕಮಲಾಬಾಯಿ, ಸಿದ್ಧಪ್ಪಾ, ಸಿಬ್ಬಂದಿ ಮಧುಮತಿ, ಪ್ರಿಯಾ ಇದ್ದರು. ಸುಮಂಗಲಾ ಸ್ವಾಗತಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

