ರಾಯಚೂರು

ನೂತನ ಪಿಂಚಣಿ ಯೋಜನೆ ವಿರೋಧಿ ಶಿಕ್ಷಕರ ಸಂಘ ಅಸ್ತಿತ್ವಕ್ಕೆ

Published On :

ಸಿಂಧನೂರು: ರಾಜ್ಯ ಸರ್ಕಾರ 2006ರಿಂದ ಜಾರಿಗೆ ತಂದಿರುವ ಹೊಸ ಪಿಂಚಣಿ ಯೋಜನೆಯನ್ನು ವಿರೋಧಿಸಿ ರಾಜ್ಯ ಸಂಚಾಲಕ ಬಾಬುರೆಡ್ಡಿ, ಜಿಲ್ಲಾ ಸಂಚಾಲಕ ಚಂದ್ರಗಿರೀಶ ಮಾರ್ಗದರ್ಶನದಲ್ಲಿ ತಾಲೂಕು ಘಟಕವನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದು ತಾಲೂಕು ಸಂಚಾಲಕ ಮಂಜುನಾಥ ತಿಳಿಸಿದ್ದಾರೆ. ಹೊಸ ಪಿಂಚಣಿ ಯೋಜನೆಯು ಶಿಕ್ಷಕರ ಭವಿಷ್ಯ ಕತ್ತಲಲ್ಲಿ ಮುಳುಗಲಿದ್ದು, ಈ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲು ಸಂಘವನ್ನು ಹುಟ್ಟು ಹಾಕಲಾಗಿದೆ. ಈ ಯೋಜನೆಗೆ ಒಳಪಡುವ ತಾಲೂಕಿನ ಎಲ್ಲ ಶಿಕ್ಷಕ-ಶಿಕ್ಷಕಿಯರು ಕೂಡಲೇ ಸಂಘದ ಸದಸ್ಯತ್ವ ಪಡೆದುಕೊಳ್ಳಬೇಕೆಂದು ಸಹ ಸಂಚಾಲಕರಾದ ಬಸವರಾಜ ಆರ್.ಎಚ್. ಕ್ಯಾಂಪ್, ಶಿವಪ್ಪ ಬಳಗಾನೂರು, ಸಾವನ್‌ಸಾಬ್, ಸಿದ್ದು ಜವಳಗೇರಾ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ. 9901557376, 7795008029ಕ್ಕೆ ಸಂಪರ್ಕಿಸಲು ಅವರು ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.