ಸಿಂಧನೂರು: ಹೈದ್ರಾಬಾದ್ ಕರ್ನಾಟಕ ದಲಿತ ಹಿತರಕ್ಷಣಾ ಸಮಿತಿಗೆ ವಿಜಯ ನಂಜಲದಿನ್ನಿ ಅವರನ್ನು ಗುಲ್ಬರ್ಗ ವಿಭಾಗೀಯ ಅಧ್ಯಕ್ಷರನ್ನಾಗಿ ಹಾಗೂ ರವಿರಾಜ ಸಾಗರ ಕ್ಯಾಂಪ್ ಅವರನ್ನು ವಿಭಾಗೀಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಅಜಿತಕುಮಾರ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಲೋಮನ್ ಬಡಿಗೇರ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಂಘದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ೊಡಗಿ ಸಾರ್ವಜನಿಕ ಕುಂದುಕೊರತೆಗಳಿಗೆ ಸ್ಪಂದಿಸುವಂತೆ ನೂತನ ಅಧ್ಯಕ್ಷ ಮತ್ತು ಕಾರ್ಯದರ್ಶಿಗೆ ಸೂಚಿಸಿದ್ದಾರೆ.